ಪ್ರಸಕ್ತ ಜಾಗತಿಕ ಸಂದರ್ಭದಲ್ಲಿ ಭಗವಾನ್ ಮಹಾವೀರರ ಶಾಂತಿ ಸಂದೇಶ ಜಗತ್ತಿಗೆ ಅವಶ್ಯ:ಸಚಿವ ಶಿವರಾಜ ತಂಗಡಗಿ

RELATED POSTS

ಬೆಂಗಳೂರು(www.thenewzmirror.com) : ಯುದ್ಧ ಮತ್ತು ಅಹಿಂಸೆ ಗಳಿಂದ ನಲುಗುತ್ತಿರುವ ಪ್ರಸಕ್ತ ಜಾಗತಿಕ ಸಂದರ್ಭದಲ್ಲಿ ಭಗವಾನ್ ಶ್ರೀ ಮಹಾವೀರರ ಶಾಂತಿ ಸಂದೇಶ ಅತ್ಯಂತ ಅವಶ್ಯಕ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. 

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಭಗವಾನ್ ಶ್ರೀ ಮಹಾವೀರರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು,ಭಗವಾನ್ ಮಹಾವೀರರು ಬುದ್ಧ ಬಸವ ಅಂಬೇಡ್ಕರ್ ಮಹಾತ್ಮ ಗಾಂಧಿ ಮುಂತಾದ ಮಹನೀಯರು ಜನಿಸಿದ ಭಾರತ ಇಡೀ ಜಗತ್ತಿಗೆ ಶಾಂತಿಯ ಸಂದೇಶ ಸಾರಿದ ಮಹಾನ್ ಭೂಮಿಯಾಗಿದೆ. ಇದರ ಮಹತ್ವವನ್ನು ಯುವ ಪೀಳಿಗೆಗೆ ಹೇಳುವ ಉದ್ದೇಶದಿಂದಲೇ ನಾವು ಇಂತಹ ಮಹಾಪುರುಷರ ಜಯಂತಿಯನ್ನು ಆಚರಣೆ ಮಾಡುತ್ತಿದ್ದೇವೆ. ಕರ್ನಾಟಕದ ಸಾಂಸ್ಕೃತಿಕ ಪರಂಪರೆಗೆ ಜೈನರ ಕೊಡುಗೆ ಬಹಳ ದೊಡ್ಡದಿದೆ. ಅದನ್ನು ಸ್ಮರಿಸುವುದು ನಮ್ಮ ಕರ್ತವ್ಯ ಎಂದು ಅವರು ಹೇಳಿದರು. 

ಮಹಾವೀರ ಜಯಂತಿಯನ್ನು ಆಚರಿಸಲು ಈ ಹಿಂದೆ ಸಿದ್ದರಾಮಯ್ಯನವರು ಮೊದಲ ಅವಧಿಯಲ್ಲಿ ಮುಖ್ಯಮಂತ್ರಿ ಆಗಿದ್ದಾಗ ಆದೇಶ ಮಾಡಿದರು. ಅದರ ಜೊತೆಗೆ ಭಗವಾನ್ ಮಹಾವೀರರ ಹೆಸರಿನಲ್ಲಿ ರಾಷ್ಟ್ರೀಯ ಶಾಂತಿ ಪ್ರಶಸ್ತಿಯನ್ನು ಸಹ ಸ್ಥಾಪನೆ ಮಾಡಲಾಯಿತು. ಈ ವರ್ಷ ಶ್ರೀ ಭಗವಾನ್ ಮಹಾವೀರ ರಾಷ್ಟ್ರೀಯ ಶಾಂತಿ ಪ್ರಶಸ್ತಿಯನ್ನು ಪಂಡಿತರತ್ನ ಎಸ್ ಶಾಂತಿರಾಜ ಶಾಸ್ತ್ರಿ ಟ್ರಸ್ಟ್ ಗೆ ಘೋಷಣೆ ಮಾಡಲಾಗಿದೆ ಸದ್ಯದಲ್ಲಿಯೇ ಮುಖ್ಯಮಂತ್ರಿಗಳ ದಿನಾಂಕ ಪಡೆದು ವಿವಿಧ ಪ್ರಶಸ್ತಿಗಳ ಪ್ರದಾನ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುವುದು ಎಂದು ಅವರು ಹೇಳಿದರು. 

ಜೈನ ಸಮುದಾಯದ ಅಭಿವೃದ್ಧಿಗೆ ಅಗತ್ಯವಾದ ಎಲ್ಲಾ ನೆರವನ್ನು ನಮ್ಮ ಸರ್ಕಾರ ನೀಡುತ್ತದೆ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದರು. 

ಸಮಾರಂಭದಲ್ಲಿ ಮಾತನಾಡಿದ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ .ಸುಧಾಕರ್ ಅವರು ಮಾತನಾಡಿ ನಮ್ಮ ಸರ್ಕಾರ ಜೈನ ಸಮುದಾಯದ ಪರವಾಗಿದೆ ,ಪ್ರಸಕ್ತ ವರ್ಷ 100 ಕೋಟಿ ರೂಪಾಯಿಗಳನ್ನು ಜೈನ ಸಮುದಾಯದ ಅಭಿವೃದ್ಧಿಗೆ ಬಳಸಲು ಉದ್ದೇಶಿಸಿದೆ ಎಂದರು. ಜೈನ ಬಸದಿಗಳ ಜೀರ್ಣೋದ್ಧಾರಕ್ಕೆ ನಮ್ಮ ಸರ್ಕಾರ ಮುಂದಾಗಿದೆ ಎಂದು ಹೇಳಿದರು. 

ಶ್ರೀ ಕ್ಷೇತ್ರ ಸಿಂಹನಗದ್ದೆ ಜೈನಮಠ, ನರಸಿಂಹ ರಾಜಪುರದ ಸ್ವಾಮೀಜಿಗಳಾದ ಪರಮಪೂಜ್ಯ ಸ್ವಸ್ತಿಶ್ರೀ ಲಕ್ಷ್ಮಿಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಅವರು ಸಮಾರಂಭದಲ್ಲಿ ಆಶೀರ್ವಚನ ನೀಡಿದರು. 

ರಾಜ್ಯಸಭೆ ಸದಸ್ಯ ಲೆಹರ್ ಸಿಂಗ್ ಸಿರೋಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಕೆ.ಎಂ.ಗಾಯಿತ್ರಿ ಹಾಗೂ ಕರ್ನಾಟಕ ಜೈನ್ ಅಸೋಸಿಯೇಷನ್ ಅಧ್ಯಕ್ಷ ಎಸ್ ಜಿತೇಂದ್ರ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ಬಲವಂತರಾವ್ ಪಾಟೀಲ್, ಬನಶಂಕರಿ ಹಾಗೂ ಇತರ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist