ಬೆಂಗಳೂರು/ ನವದೆಹಲಿ, (www.thenewzmirror.com);
26/11ರ ಮುಂಬೈ ಭಯೋತ್ಪಾದನಾ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ನನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಪಾಕಿಸ್ತಾನಕ್ಕೆ ಮನವಿ ಮಾಡಲಾಗಿದೆ ಎಂದು ಭಾರತ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಮಾಹಿತಿ ನೀಡಿದ್ದಾರೆ.
ಭಯೋತ್ಪಾದನೆಗೆ ಹಣಕಾಸು ನೆರವು ನೀಡುತ್ತಿದ್ದ ಎರಡು ಪ್ರಕರಣಗಳಲ್ಲಿ ತಪ್ಪಿತಸ್ಥರೆಂದು ಪಾಕಿಸ್ತಾನದ ನ್ಯಾಯಾಲಯವು 33 ವರ್ಷ ಜೈಲು ಶಿಕ್ಷೆಯನ್ನು ವಿಧಿಸಿತ್ತು.
ಈ ಹಿಂದೆ ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದ ಹಲವು ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿದ್ದಾರೆ. 2020ರಲ್ಲಿಯೂ ಅವರಿಗೆ 15 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು.