ಬೆಂಗಳೂರು, ( www.thenewzmirror.com) :
ಈ ಬಾರಿಯ IPL(ಇಂಡಿಯನ್ ಪ್ರೀಮಿಯರ್ ಲೀಗ್) ಸೀಸನ್ 17 ರಲ್ಲಿ ರಿಷಭ್ ಪಂತ್ ಕಣಕ್ಕಿಳಿಯಲಿದ್ದಾರಾ ಎಂಬ ಪ್ರಶ್ನೆಗೆ BCCI ಉತ್ತರ ಕೊಟ್ಟಿದೆ.
ಬೆಂಗಳೂರಿನಲ್ಲಿರುವ ನ್ಯಾಷನಲ್ ಕ್ರಿಕೆಟ್ ಅಕಾಡೆಮಿ(NCA)ಯಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಗ್ರೀನ್ ಸಿಗ್ನಲ್ ಪಡೆದುಕೊಂಡಿದ್ದು, ಆ ಮೂಲಕ ಮತ್ತೆ ಮೈದಾನಕ್ಕಿಳಿಯಲು ರಿಷಭ್ ಪಂತ್ ಸಜ್ಜಾಗಿದ್ದಾರೆ.
ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ 2024 ರ ಋತುವಿಗೆ ವಿಕೆಟ್ ಕೀಪರ್ ಕಂ ಬ್ಯಾಟ್ಸ್ ಮನ್ ರಿಷಭ್ ಪಂತ್ ಫಿಟ್ ಬಿಸಿಸಿಐ ಹೇಳಿದೆ. ಉತ್ತರಾಖಂಡದ ರೂರ್ಕಿ ಬಳಿ ಡಿಸೆಂಬರ್ 30, 2022 ರಂದು ಸಂಭವಿಸಿದ ಭೀಕರ ರಸ್ತೆ ಅಪಘಾತ ಸಂಭವಿಸಿತ್ತು. ಅದಾದ ನಂತರ ಅಂದರೆ 14 ತಿಂಗಳ ವ್ಯಾಪಕ ಪುನರ್ವಸತಿ ಮತ್ತು ಚೇತರಿಕೆ ಪ್ರಕ್ರಿಯೆಗೆ ಪಂತ್ ಒಳಗಾಗಿದ್ದರು. ಇದೀಗ BCCI ಹಸಿರು ನಿಶಾನೆ ಕೊಟ್ಟಿದ್ದು, ಮಾರ್ಚ್ 22ರಿಂದ ಆರಂಭವಾಗಲಿರುವ ಐಪಿಎಲ್ ಟೂರ್ನಿಯಲ್ಲಿ ಅವರು ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಲಿದ್ದಾರೆ.
ಅತ್ತ ಐಪಿಎಲ್ ಮುಕ್ತಾಯದ ಬೆನ್ನಲ್ಲೇ ಟಿ20 ವಿಶ್ವಕಪ್ ಕೂಡ ಶುರುವಾಗಲಿದೆ. ಹೀಗಾಗಿ ಈ ಬಾರಿಯ ಐಪಿಎಲ್ ರಿಷಭ್ ಪಂತ್ ಪಾಲಿಗೆ ನಿರ್ಣಾಯಕ. ಏಕೆಂದರೆ ಕಳೆದ ಒಂದು ವರ್ಷದಿಂದ ಟೀಮ್ ಇಂಡಿಯಾದಿಂದ ಹೊರಗುಳಿದಿರುವ ಪಂತ್ ಐಪಿಎಲ್ನಲ್ಲಿ ಮಿಂಚಿದರೆ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಬಹುದು.