BJPಗೆ ಭ್ರಷ್ಟ ಎಂಬ ಲೇಬಲ್ ತಂದುಕೊಟ್ಟಿದ್ದೇ ವಿಜಯೇಂದ್ರ: ಹೊಸ ಬಾಂಬ್ ಸಿಡಿಸಿದ  ಸಾಹುಕಾರ..!

It is Vijayendra who gave BJP the label of corrupt: Sahukar who exploded the new bomb..!

ಬೆಂಗಳೂರು, (www.thenewzmirror.com) ;

ಬಿಜೆಪಿಗೆ ಭ್ರಷ್ಟ ಎಂಬ ಲೇಬಲ್ ಕೊಟ್ಟವನೇ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ವಿಜಯೇಂದ್ರನ ರಾಜ್ಯಾಧ್ಯಕ್ಷ ಸ್ಥಾನವನ್ನು ನಾನು ಎಂದಿಗೂ ಒಪ್ಪುವುದಿಲ್ಲ. ಅವನು ಜೂನಿಯರ್, ಅವನಿಗೆ ಪಕ್ಷದ ಸಿದ್ಧಾಂತ ಗೊತ್ತಿಲ್ಲ ಎಂದು ಶಾಸಕ ರಮೇಶ್​ ಜಾರಕಿಹೊಳಿ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.

RELATED POSTS

ಅಥಣಿಯಲ್ಲಿ ಮಾತನಾಡಿದ ಅವರು, ವಿಜಯೇಂದ್ರನ ರಾಜ್ಯಾಧ್ಯಕ್ಷ ಸ್ಥಾನವನ್ನು ನಾನು ಎಂದಿಗೂ ಒಪ್ಪುವುದಿಲ್ಲ. ಮುಂದಿನ ಅಧ್ಯಕ್ಷ ಯಾರು ಎಂಬುದನ್ನು ಪಕ್ಷದ ವರಿಷ್ಠರು ತೀರ್ಮಾನ ಮಾಡಬೇಕು. ವಿಜಯೇಂದ್ರ ಜೂನಿಯರ್, ಅವನಿಗೆ ಪಕ್ಷದ ಸಿದ್ಧಾಂತ ಗೊತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ನಾನು ಯಡಿಯೂರಪ್ಪನವರನ್ನು ಯಾವತ್ತೂ ವಿರೋಧ ಮಾಡುವುದಿಲ್ಲ. ಯಡಿಯೂರಪ್ಪ ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕರು. ಯಡಿಯೂರಪ್ಪರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ ವಿಜಯೇಂದ್ರ ನಮ್ಮ ಪಕ್ಷದ ನಾಯಕನಲ್ಲ. ಬಿಜೆಪಿ ಒಬ್ಬರ ಕಪಿಮುಷ್ಠಿಯಲ್ಲಿ ಇರುವುದು ಬೇಡ. ಸಾಮೂಹಿಕ ನಾಯಕತ್ವಕ್ಕೆ ಒತ್ತು ಕೊಡುವಂತೆ ನಾವು ಮೊನ್ನೆ ಸಭೆಯಲ್ಲಿ ಹೇಳಿದ್ದೇವೆ ಎಂದರು.

ಅಷ್ಟೇ ಅಲ್ದೆ 15 ರಿಂದ 20 ಜನರ ಸಾಮೂಹಿಕ ನಾಯಕತ್ವದ ಕೈಯಲ್ಲಿ ಪಕ್ಷವನ್ನು ಕೊಡುವಂತೆ ಮನವಿ ಮಾಡಿದ್ದೇವೆ. 15 ರಿಂದ 20 ಜನರ ನಾಯಕತ್ವಕ್ಕೆ ಲೀಡರ್‌ಶಿಪ್‌ ಕೊಟ್ಟರೆ 120 ರಿಂದ 130 ಸ್ಥಾನಗಳನ್ನು ಗೆಲ್ಲಿಸಿ ಕೊಡುವ ಶಕ್ತಿ ಬರುತ್ತೆ ಅಂತ‌ ಮನವರಿಕೆ ಮಾಡಲಾಗಿದೆ ಎಂದು ತಿಳಿಸಿದರು.

ಯಡಿಯೂರಪ್ಪನವರಿಗೆ ವಯಸ್ಸಾಗಿದ್ದು, ಅವರಿಗೆ ವಿಶ್ರಾಂತಿ ಅಗತ್ಯವಿದೆ. ಅವರ ಸಲಹೆ ಬೇಕಾದರೆ ಅವರ ಮನೆಗೆ ಹೋಗುತ್ತೇವೆ ಎಂದು ಇದೇ ವೇಳೆ ಅಭಿಪ್ರಾಯ ವ್ಯಕ್ತಪಡಿಸಿದರು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist