ಜಗದೀಶ್ ಶೆಟ್ಟರ್ ಘರ್ ವಾಪ್ಸಿ..! NEXT ಯಾರು.?

ಬೆಂಗಳೂರು, (www.thenewzmirror.com);

ಲೋಕಸಮರದ ಹೊತ್ತಲ್ಲೇ ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಲೋಕಸಮರದಲ್ಲಿ ಹೆಚ್ಚು ಸ್ಥಾನಗಳನ್ನ ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ ನಾಯಕರು, ಈ ಹಿಂದೆ ಕಾಂಗ್ರೆಸ್‌ ಸೇರ್ಪಡೆಯಾದ ನಾಯಕರನ್ನ ಮತ್ತೆ ಪಕ್ಷಕ್ಕೆ ಕರೆತರುವ ಪ್ರಯತ್ನದಲ್ಲಿ ಕೊನೆಗೂ ಯಶಸ್ಸಿಯಾಗಿದ್ದಾರೆ.

RELATED POSTS

ದೆಹಲಿಯ ಪಕ್ಷದ ಕೇಂದ್ರ ಕಚೇರಿಯಲ್ಲಿ ಅಧಿಕೃತವಾಗಿ ಬಿಜೆಪಿಯನ್ನ ಮರು ಸೇರ್ಪಡೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಜಗದೀಶ್ ಶೆಟ್ಟರ್ ಅವರು ದೆಹಲಿಯಲ್ಲಿನ ಅಮಿತ್ ಶಾ ನಿವಾಸದಲ್ಲಿ ಇಂದು ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿ, ಶೆಟ್ಟರ್ ಮನವೋಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಾಂಗ್ರೆಸ್ ಸೇರಿದ್ದ ಶೆಟ್ಟರ್

ಇಂದು ದೆಹಲಿಯಲ್ಲಿ ನಡೆದ ರ್ಯಾಪಿಡ್ ಸಭೆಯಲ್ಲಿ ಅಮಿತ್ ಶಾ ಯಡಿಯೂರಪ್ಪ ಹಾಗೂ ವಿಜಯೇಂದ್ರ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿತ್ತು. ಸಭೆಯಲ್ಲಿ ಯಾವುದೇ ಷರತ್ತು ವಿಧಿಸದೆ ಶೆಟ್ಟರ್ ಬಿಜೆಪಿ ಸೇರಲು ಮನಸು ಮಾಡಿದ್ರು. ಅಮಿತ್ ಶಾ ಜೊತೆ ಮಾತುಕತೆ ನಡೆಸಿದ ಬಳಿಕ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾರನ್ನ ಭೇಟಿ ಮಾಡಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಜಗದೀಶ್ ಶೆಟ್ಟರ್ ವಿಧಾನ ಪರಿಷತ್ ಸದಸ್ಯರಾಗಿರುವ ಹಿನ್ನೆಲೆ ವಿಧಾನ ಪರಿಷತ್ ಸಭಾಪತಿ ಹೊರಟ್ಟಿ ಅವರಿಗೆ ಶೆಟ್ಟರ್ ದೂರವಾಣಿ ಕರೆ ಮಾಡಿ ರಾಜೀನಾಮೆ ನೀಡುವ ಬಗ್ಗೆ ಮಾತುಕತೆ ನಡೆಸಿದ್ದಾರೆ. ದೆಹಲಿಯ್ಲಲಿ ಬಿಜೆಪಿ ಪಕ್ಷ ಸೇರ್ಪಡೆಗೂ ಮುನ್ನ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷ ಹಾಗೂ ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಇ-ಮೇಲ್ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಅವರಿಗೆ ರಾಜೀನಾಮೆ ಪತ್ರ ಕಳುಹಿಸಿದ್ದಾರೆ‌.

ಶೆಟ್ಟರ್ ಕಾಂಗ್ರೆಸ್ ಗೆ ನೀಡಿದ್ದಾರೆ ಎನ್ನಲಾದ ರಾಜೀನಾಮೆ ಪತ್ರ.!

ದೆಹಲಿಯ ದಿಢೀರ್ ಬೆಳವಣಿಗೆಯೊಂದರಲ್ಲಿ ಬಿನೆಪಿ ಸೇರಿದ ಶೆಟ್ಟರ್ ಘರ್ ವಾಪ್ಸಿ ಆಗಿದ್ದಾರೆ. ಶೆಟ್ಟರ್ ಬಳಿಕ ಲಕ್ಷ್ಮಣ್ ಸವದಿ ಬಿಜೆಪಿ ಸೇರುತ್ತಾರೆ ಎಂದು ಹೇಳಲಾಗುತ್ತಿದ್ದು, ಬಿಜೆಪಿ ನಾಯಕರು ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಇದರ ಬೆನ್ನಲ್ಲೇ ಎಚ್ಚೆತ್ತ ಕಾಂಗ್ರೆಸ್, ಸವದಿಗೆ ಸಚಿವ ಸ್ಥಾನದ ಆಫರ್ ನೀಡಿದ್ದಾರೆ. ಆ ಮೂಲಕ ಅವರನ್ನ ಪಕ್ಷದಲ್ಲೇ ಉಳಿಸಿಕೊಳ್ಳೋ ಪ್ಲಾನ್ ಅನ್ನ ಕೈ ನಾಯಕರು ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ‌.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist