ಭಯೋತ್ಪಾದನೆ ನಿಗ್ರಹ,ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ಜೆಡಿಎಸ್ ವರಿಷ್ಠ ದೇವೇಗೌಡ

RELATED POSTS

ನವದೆಹಲಿ(www.thenewzmirror.com): ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಎಲ್ಲಾ ಕ್ರಮಗಳನ್ನು ಮುಕ್ತಕಂಠದಿಂದ ಬೆಂಬಲಿಸುವುದಾಗಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಪ್ರಕಟಿಸಿದರು.

ನವದೆಹಲಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು; ಪೆಹಲ್ಗಾಮ್ ಘಟನೆ ಅಮಾನವೀಯ. ಮೊದಲ ಬಾರಿಗೆ ಭಯೋತ್ಪಾದಕರು ಪ್ರವಾಸಿಗರ ಮೇಲೆ ದಾಳಿ ಮಾಡಿದ್ದಾರೆ. ಇದು ಅತ್ಯಂತ ಹೇಯ. ಈ ಕೆಲಸ ಮಾಡಿದವರಿಗೆ ತಕ್ಕ ಶಾಸ್ತಿ ಆಗಲೇಬೇಕು. ಈ ಹಿನ್ನೆಲೆಯಲ್ಲಿ ಪ್ರಧಾನಿಗಳು ಕೈಗೊಳ್ಳುವ ನಿರ್ಧಾರಕ್ಕೆ ಜೆಡಿಎಸ್ ಬದ್ಧವಾಗಿರುತ್ತದೆ ಎಂದು ಸ್ಪಷ್ಟಪಡಿಸಿದರು.

ರಕ್ಷಣಾ ಪಡೆಗಳಿಗೆ ಮೋದಿ ಅವರು ಮುಕ್ತ ಸ್ವಾತಂತ್ರ್ಯ ನೀಡಿದ್ದಾರೆ. ಮೊದಲ ಬಾರಿಗೆ ದೇಶದ ಪ್ರಧಾನಿ ಮೋದಿ ಅವರು ಇಂತಹ ದಿಟ್ಟ ನಿರ್ಧಾರ ಮಾಡಿದ್ದಾರೆ. ಇತಿಹಾಸದಲ್ಲಿ ಈ ರೀತಿ ಎಂದೂ ನಿರ್ಧಾರ ಆಗಿರಲಿಲ್ಲ ಎಂದ ಮಾಜಿ ಪ್ರಧಾನಿಗಳು, 

ಗೃಹ, ರಕ್ಷಣೆ ಹಾಗೂ ವಿದೇಶಾಂಗ ಖಾತೆಗಳನ್ನು ನಿಭಾಯಿಸುತ್ತಿರುವ ಸಚಿವರುಗಳು ಅತ್ಯಂತ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದಾರೆ ಎಂದು ದೇವೇಗೌಡರು ಮೆಚ್ಚುಗೆ ವ್ಯಕ್ತಪಡಿಸಿದರು.

ಇಡೀ ದೇಶ ಪ್ರಧಾನಿ ಮೋದಿಯವರ ಜೊತೆ ನಿಂತಿದೆ. ಎಲ್ಲಾ ರಾಜಕೀಯ ಪಕ್ಷಗಳು ಮೋದಿಯವರ ನಿರ್ಧಾರವನ್ನು ಬೆಂಬಲಿಸಿವೆ. ಭಯೋತ್ಪಾದಕರಿಗೆ ತಕ್ಕ ಪಾಠ ಕಲಿಸಬೇಕಾಗಿದೆ. ಪಾಕಿಸ್ತಾನ ಪ್ರೇರಿತ ಉಗ್ರರನ್ನು ಸದೆಬಡಿಯುವವರೆಗೆ ವಿರಮಿಸುವುದಿಲ್ಲ ಎಂದು ಮೋದಿ‌ ಹೇಳಿದ್ದಾರೆ. ನಾನು, ನಮ್ಮ ಪಕ್ಷ ಇಡಿ ದೇಶ ಪ್ರಧಾನಿ ಮೋದಿ ಜೊತೆಗಿರುತ್ತೇವೆ ಎಂದು ದೇವೇಗೌಡರು ಹೇಳಿದರು.

1971ರ ಯುದ್ಧ ಕಾಲಕ್ಕೂ ಈಗಿನ ಪರಿಸ್ಥಿತಿಗೂ ಬಹಳ ವ್ಯತ್ಯಾಸವಿದೆ. ಹೋಲಿಕೆ ಮಾಡಲು ಸಾಧ್ಯವಿಲ್ಲ. ಭಾರತ ಅಗಾಧವಾಗಿ ಬೆಳೆದಿದೆ. ಕಳೆದ ಹತ್ತು ವರ್ಷಗಳಲ್ಲಿ ದೇಶವು ಸಾಕಷ್ಟು ಅಭಿವೃದ್ಧಿ, ಬದಲಾವಣೆಯನ್ನು ಕಂಡಿದೆ ಎಂದ ಅವರು; ಇಲ್ಲಿ ಹಿಂದೂ ಮುಸ್ಲಿಂ ಎನ್ನುವ ಪ್ರಶ್ನೆಯಲ್ಲ. ಧರ್ಮ, ಜಾತಿ ಪ್ರಶ್ನೆ ಉದ್ಭವವಾಗುದಿಲ್ಲ. ದೇಶದ ಭದ್ರತೆ ಮುಖ್ಯ. ಯುದ್ಧ ಮಾಡಬೇಕೋ ಬೇಡವೋ ಎನ್ನುವ ನಿರ್ಧಾರವನ್ನು ಸೇವೆಗೆ ಬಿಡಲಾಗಿದೆ. ಮೂರು ಸೇನೆಗಳ ಮುಖ್ಯಸ್ಥರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ ಎಂದು ಮಾಜಿ ಪ್ರಧಾನಿಗಳು ಹೇಳಿದರು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist