Job Offer | 961 ಹುದ್ದೆಗಳ ಭರ್ತಿಗೆ ಕೃಷಿ ಇಲಾಖೆ ತೀರ್ಮಾನ, KPSC ಗೆ ಪ್ರಸ್ತಾವನೆ ಸಲ್ಲಿಕೆ

ಬೆಂಗಳೂರು, (www.thenewzmirror.com) ;

ಕೃಷಿ ಇಲಾಖೆಯಲ್ಲಿ ಖಾಲಿ ಇರುವ 961 ಹುದ್ದೆಗಳನ್ನ ಶೀಘ್ರದಲ್ಲೇ ಭರ್ತಿ ಮಾಡಲಾಗುವುದು ಎಂದು ಕೃಷಿ ಸಚಿವ  ಚಲುವರಾಯಸ್ವಾಮಿ ಮಾಹಿತಿ ನೀಡಿದ್ದಾರೆ‌.

RELATED POSTS

ಇಲಾಖೆಯಲ್ಲಿ ಆಡಳಿತಾತ್ಮಕ ಸುಧಾರಣೆ ತೆಉವ ನಿಟ್ಟಿನಲ್ಲಿ ಹಲವು ರೀತಿಯ ಕ್ರಮ ಕೈಗೊಂಡಿದ್ದು ಖಾಲಿ ಇರುವ ಹುದ್ದೆಗಳ ಹಂತಹಂತವಾಗದ ಭರ್ತಿಗೆ ಮುಂದಾಗಿದ್ದಾರೆ.

ಮೊದಲ ಹಂತದಲ್ಲಿ ಇಲಾಖೆಯಲ್ಲಿ ಖಾಲಿ ಇರುವ 961 ವಿವಿಧ ವೃಂದದ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ. ಇದಕ್ಕಾಗಿ ಈಗಾಗಲೇ ಆರ್ಥಿಕ ಇಲಾಖೆ ಅನುಮೋದನೆ ಪಡೆದು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಹುದ್ದೆಗಳ ವಿವರ:-
ಕಲ್ಯಾಣ ಕರ್ನಾಟಕ ಭಾಗದಲ್ಲಿ 34 ಕೃಷಿ ಅಧಿಕಾರಿ 223 ಸಹಾಯಕ ಕೃಷಿ ಅಧಿಕಾರಿ 17 ದ್ವಿತೀಯ ದರ್ಜೆ ಸಹಾಯಕರು, 17 ಬೆರಳಚ್ಚುಗಾರರು ಹಾಗೂ ಉಳಿಕೆ ವೃಂದದಲ್ಲಿ 84 ಕೃಷಿ ಅಧಿಕಾರಿ 586 ಸಹಾಯಕ ಕೃಷಿ ಅಧಿಕಾರಿಗಳು
ಸೇರಿದಂತೆ ಒಟ್ಟಾರೆ 961 ಹುದ್ದೆಗಳ ನೇಮಕಾತಿಗೆ ಕೃಷಿ ಇಲಾಖೆಯಿಂದ ಕರ್ನಾಟಕ ಲೋಕಾಸೇವಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist