ಕರ್ನಾಟಕದ ಸಾರ್ವತ್ರಿಕ ಚುನಾವಣೆ ಬೆಳಗ್ಗೆ 7ಗಂಟೆಯಿಂದ ಸಂಜೆ 6 ಗಂಟೆವರೆಗೂ ನಡೆಯಲಿದೆ. ನಿಗಧಿತ ಸಮಯದಲ್ಲಿ ಮತದಾರರು ಮತಚಲಾವಣೆ ಮಾಡಲಿದ್ದು, ತಮ್ಮ ನೆಚ್ಚಿನ ಜನನಾಯಕನ ಆಯ್ಕೆ ಮಾಡಲಿದ್ದಾರೆ.
ರಾಜ್ಯದ ಒಟ್ಟು 224 ಕ್ಷೇತ್ರಗಳಲ್ಲಿ 2615 ಮಂದಿ ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.
ರಾಜ್ಯದಲ್ಲಿ ಒಟ್ಟು 5, 31,33,054 ಕೋಟಿ ಮತದಾರರಿದ್ದು, 2,67,28,053 ಕೋಟಿ ಪುರುಷ ಹಾಗೂ 2,64,00,074 ಕೋಟಿ ಮಹಿಳಾ ಮತದಾರರಿದ್ದಾರೆ. ಇದೇ ಮೊದಲ ಬಾರಿಗೆ ದಾಖಲೆ ಪ್ರಮಾಣದಲ್ಲಿ 11, 71,558 ಯುವ ಮತದಾರರು ಇದ್ದಾರೆ.
ರಾಜ್ಯದಲ್ಲಿ ಒಟ್ಟು 58,545 ಮತಗಟ್ಟೆಗಳಿದ್ದು, ಚುನಾವಣಾ ಆಯೋಗ ಮತದಾನಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದೆ.
ಬಿಗಿ ಭದ್ರತೆಯಲ್ಲಿ ನಡೆಯಲಿದೆ ಮತದಾನ
ರಾಜ್ಯಾದ್ಯಂತ ಒಂದೇ ಹಂತದಲ್ಲಿ 224 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಭದ್ರತೆಗಾಗಿ 1.56 ಲಕ್ಷ ಸಿಬ್ಬಂದಿ ನಿಯೋಜಿಸಲಾಗಿದೆ. 304 ಡಿವೈಎಸ್ ಪಿಗಳು, 991 ಪಿಐಗಳು, 2610 ಪಿಎಸ್ ಐಗಳು, 5803 ಎಎಸ್ ಐಗಳು,46, 421 ಪೊಲೀಸರು, 27,900 ಗೃಹ ರಕ್ಷಕರು ಸೇರಿದಂತೆ 84,119 ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಜೊತೆಗೆ ಹೊರ ರಾಜ್ಯಗಳಿಂದ 8,500 ಅಧಿಕಾರಿ, ಸಿಬ್ಬಂದಿ ಹಾಗೂ ಗೃಹ ರಕ್ಷಕರನ್ನು ನೇಮಿಸಲಾಗಿದೆ.