ಬೆಂಗಳೂರು, (www.thenewzmirror.com) ;
ಉಚಿತ ಯೋಜನೆಗಳನ್ನ ಘೋಷಣೆ ಮಾಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಈಗಾಗಲೇ ನುಡಿದಂತೆ ನಡೆಯುತ್ತಿದ್ದೇವೆ ಎಂದು ಹೇಳುತ್ತಿದೆ. ಇದರ ಬೆನ್ನಲ್ಲೇ ಅತ್ಯಂತ ಗೊಂದಲದ ಗೂಡಾಗಿರುವ 200 ಯೂನಿಟದ ಉಚಿತ ನೀಡಿಕೆಯಲ್ಲಿ ಸ್ಪಷ್ಟತೆ ಜನತೆಗೆ ಇನ್ನೂ ಸಿಕ್ಕಿಲ್ಲ.
ಒಂದು ಆರ್ ಆರ್ ಗೆ ಮಾತ್ರ 200 ಯೂನಿಟ್ ಉಚಿತ ಎಂದು ಹೇಳಿರೋ ರಾಜ್ಯದ ನಡೆ ಇದೀಗ ಆಕ್ರೋಶಕ್ಕೆ ಕಾರಣವಾಗಿದೆ. ಕಾರಣ ರಾಜ್ಯದಲ್ಲಿ ಶೇಕಡಾ 50 ರಷ್ಟು ಮಂದಿ ಬಾಡಿಗೆ ಮನೆಯಲ್ಲಿ ವಾಸ ಮಾಡ್ತಾ ಇದ್ದಾರೆ. ಹಾಗಿದ್ದರೆ ಅವರ ಪಾಡೇನು ಅವರು ವಿದ್ಯುತ್ ಬಿಲ್ ಕಟ್ಟಬೇಕಾ ಅನ್ನುವ ಪ್ರಶ್ನೆ ಉದ್ಬವವಾಗಿದೆ.
ಯಾಕಂದ್ರೆ ಬಾಡಿಗೆ ಮನೆಯಲ್ಲಿದ್ದರೂ ಅದರ ಆರ್ ಆರ್ ಮನೆ ಮಾಲೀಕರ ಹೆಸರಿನಲ್ಲಿ ಇರುತ್ತೆ. ಇಂಥದರಲ್ಲಿ ಮನೆ ಮಾಲೀಕನಿಗೆ ಉಚಿತ ಸಿಗುತ್ತೆ ಬಾಡಿಗೆದಾರರು ಪೂರ್ಣ ಪ್ರಮಾಣದಲ್ಲಿ ಬಿಲ್ ಕಟ್ಟಬೇಕು. ಹೀಗಿರುವಾಗ ಉಚಿತ 200 ಯೂನಿಟ್ ಉಚಿತ ಎಂದು ಘೋಷಣೆ ಮಾಡಿದ್ದು ಯಾಕೆ ಎನ್ನುವ ಪ್ರಶ್ನೆ ಇದೀಗ ಸದ್ದಿಲ್ಲದೆ ಎದ್ದಿದೆ.
ಈ ಎಲ್ಲಾ ಗೊಂದಲಗಳಿಗೆ ತೆರೆ ಎಳೆಯುವ ಕೆಲಸ ಮಾಡಿರುವ ಇಂಧನ ಇಲಾಖೆ, ಗೃಹಜ್ಯೋತಿ ಯೋಜನೆಯಡಿ ಬಾಡಿಗೆದಾರರಿಗೂ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ ಕೊಟ್ಟಿದ್ದಾರೆ
ಮಾಲೀಕನ ಎಷ್ಟು ಬಾಡಿಗೆ ಮನೆ ಇದೆ ಎಂದು ಘೋಷಿಸಬೇಕು ಹಾಗೂ ಮನೆ ಮಾಲೀಕ ಕಡ್ಡಾಯವಾಗಿ ತೆರಿಗೆ ಕಟ್ಟಿರಬೇಕು. ಇಷ್ಟು ಬಾಡಿಗೆ ಮನೆಗಳಿದೆ, ಇಷ್ಟು ಮನೆಗಳಿಗೆ ನಾನು ಟ್ಯಾಕ್ಸ್ ಕಟ್ಟಿದ್ದೇನೆ ಎಂದು ಮಾಹಿತಿ ನೀಡಬೇಕು. ಒಂದು ವೇಳೆ ತಪ್ಪು ಮಾಹಿತಿ ನೀಡಿದ್ರೆ ಈ ಯೋಜನೆ ಅನ್ವಯವಾಗುವುದಿಲ್ಲ ಎಂದೂ ಜಾರ್ಜ್ ಸ್ಪಷ್ಟಪಡಿಸಿದ್ದಾರೆ.
ಎಷ್ಟು ವರ್ಷಗಳಿಂದ ಬಾಡಿಗೆ ಕಟ್ಟುತ್ತಿದ್ದೇವೆ. ವಿದ್ಯುತ್ ಬಿಲ್, ಮನೆ ಬಾಡಿಗೆ, ಕರಾರು ಪತ್ರವಿರಬೇಕು. ಎಷ್ಟು ಮನೆ ಇದೆ ಎಂದು ಘೋಷಿಸಿರಬೇಕು. ಬಾಡಿಗೆಗಾರರಿಗೆ ಉಚಿತ ವಿದ್ಯುತ್ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದ ಅವರು, ಪ್ರಯೋಜನವನ್ನು ಪಡೆಯಲು ಬಯಸುವ ಗ್ರಾಹಕರು ‘ಸೇವಾ ಸಿಂಧು’ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು.
2022-2023ರ ಹಣಕಾಸು ವರ್ಷದಲ್ಲಿ 12 ತಿಂಗಳ ಸರಾಸರಿ ಬಳಕೆ ಮತ್ತು ಶೇಕಡಾ 10ರಷ್ಟು ಹೆಚ್ಚಿನ ವಿದ್ಯುತ್ ಬಳಕೆ 200 ಯೂನಿಟ್ಗಳನ್ನು ಮೀರದಿದ್ದರೆ ಪ್ರಯೋಜನ ಪಡೆಯಲು ಅರ್ಹರಾಗಿರುತ್ತಾರೆ. 200 ಯೂನಿಟ್ ದಾಟಿದ ಗ್ರಾಹಕರು ಸಂಪೂರ್ಣ ವಿದ್ಯುತ್ ಬಿಲ್ ಪಾವತಿಸಬೇಕಾಗುತ್ತದೆ. ಹಾಗೆನೇ, ಬಾಡಿಗೆದಾರರಿಗೂ 200 ಯೂನಿಟ್ ವಿದ್ಯುತ್ ಉಚಿತ ನೀಡಲಾಗುತ್ತದೆ, ಬಾಡಿಗೆದಾರರು ಅರ್ಜಿ ಸಲ್ಲಿಸುವಾಗ ಸಂಪೂರ್ಣ ದಾಖಲೆಗಳನ್ನು ನೀಡಬೇಕು.