ಬೆಂಗಳೂರು, (www.thenewzmirror.com ) ;
5 ಗ್ಯಾರಂಟಿ ಯೋಜನೆಗಳ ಜಾರಿಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆಯಲಾಗಿದ್ದು, ತಕ್ಷಣದಿಂದ ಯಾವುದೇ ಗ್ಯಾರಂಟಿ ಜಾರಿಗೆ ಬರೋದಿಲ್ಲ.., ಗ್ಯಾರಂಟಿಗಳ ಜಾರಿಗೆ ಒಂದಿಷ್ಟು ಷರತ್ತುಗಳನ್ನ ವಿಧಿಸಿದ್ದು, ಯಾವಗೆಲ್ಲಾ ಜಾರಿಯಾಗುತ್ತೆ ಅನ್ನೋದ್ರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ..
ಸಾಕಷ್ಟು ಮಹತ್ವ ಪಡೆದುಕೊಂಡಿದ್ದ ಇಂದಿನ ಸಂಪಿಟ ಸಭೆಯಲ್ಲಿ ಐದು ಗ್ಯಾರಂಟಿಗಳ ಜಾರಿ ವಿಚಾರ ಚರ್ಚೆ ಇತ್ತೆ ವಿನಃ ಉಳಿದ ವಿಚಾರಗಳಿಗೆ ಅಷ್ಟು ಮಹತ್ವ ಇರಲಿಲ್ಲ. ವಿಧಾನಸೌಧದಲ್ಲಿ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, ಚುನಾವಣೆ ಪೂರ್ವ ಕಾಂಗ್ರೆಸ್ ನಿಒಡಿದ್ದ ಐದೂ ಗ್ಯಾರಂಟಿಗಳನ್ನ ಜಾರಿ ಮಾಡಲು ಸಚಿವ ಸಂಪಿಟ ಸಭೆ ಒಪ್ಪಿಗೆ ನೀಡಿದೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದರು.
ಸಚಿವ ಸಂಪುಟ ಸಭೆ ಬಳಿಕ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ, ಮೊದಲ ಸಂಫುಟ ಸಭೆಯಲ್ಲಿ ಗ್ಯಾರಂಟಿ ಜಾರಿಗೆ ತಾತ್ವಿಕ ಒಪ್ಪಿಗೆ ನೀಡಿದ್ವಿ, ಅದರಂತೆ ಇಂದಿನ ಕ್ಯಾಬಿನೇಟ್ ಮೀಟಿಂಗ್ ನಲ್ಲಿ ಯಾವುದೇ ಜಾತಿ ಧರ್ಮವಿಲ್ಲದೇ ಪ್ರತಿಯೊಬ್ಬರಿಗೂ ಜಾರಿ ಮಾಡಲು ನಿರ್ಧಾರ ಮಾಡಿದ್ದು, ನುಡಿದಂತೆ ನಡೆಯುವ ಕೆಲಸ ಮಾಡಿದ್ದೇವೆ ಎಂದು ತಿಳಿಸಿದ್ರು.
ಯೋಜನೆ 1 ಗೃಹಜ್ಯೋತಿ ಯೋಜನೆಯಡಿ 200 ಯುನಿಟ್ ವಿದ್ಯುತ್
ಸಾಕಷ್ಟು ಗೊಂದಲದ ಗೂಡಾಗಿದ್ದ 200 ಯೂನಿಟ್ ಉಚಿತ ನೀಡಿಕೆ ಕುರಿತಂತೆ ಮಾಹಿತಿ ನೀಡಿದ ಸಿಎಂ, ಇಡೀ ರಾಜ್ಯಾದ್ಯಂತ ಎಲ್ಲರಿಗೂ 200 ಯುನಿಟ್ ವಿದ್ಯುತ್ ಉಚಿತ ನೀಡಲು ತೀರ್ಮಾನ ಮಾಡಲಾಗಿದೆ. ಯಾರು 200 ಯುನಿಟ್ ಒಳಗಡೆ ವಿದ್ಯುತ್ ಬಳಸುತ್ತಾರೋ ಅವರು ಬಿಲ್ ಕಟ್ಟಬೇಕಿಲ್ಲ. 12 ತಿಂಗಳ ಸರಾಸರಿ ವಿದ್ಯುತ್ ಬಳಕೆ ಮೇಲೆ 10% ಸೇರಿಸಿ ಹೆಚ್ಚುವರಿ ವಿದ್ಯುತ್ ನೀಡುತ್ತೇವೆ. ಜುಲೈ 1ರಿಂದ ಆಗಸ್ಟ್ 1ಕ್ಕೆ ಬಳಸುವ ವಿದ್ಯುತ್ ಬಳಕೆಗೆ ಬಿಲ್ ನೀಡಲಾಗುತ್ತದೆ ಎಂದು ಸಿಎಂ ಸಿದ‍್ಧರಾಮಯ್ಯ ತಿಳಿಸಿದರು.

ಯೋಜನೆ 2 ರಾಜ್ಯದ ಮಹಿಳೆಯರಿಗೆ ಉಚಿತ ಪ್ರಯಾಣ
ನಮ್ಮ ಗ್ಯಾರಂಟಿ ಪೈಕಿ ಮಹಿಳೆಯರಿಗೆ ಸರ್ಕಾರಿ ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲು ಅನುಮೋದನೆ ನೀಡಿದ್ದು, ಶಕ್ತಿಯೋಜನೆಯಡಿ ವಿದ್ಯಾರ್ಥಿಗಳನ್ನೂ ಒಳಗೊಂಡಂತೆ ಮಹಿಳೆಯರಿಗೆ ಫ್ರಿ ಬಸ್ ಪಾಸ್ ನೀಡಲು ತೀರ್ಮಾನ ಮಾಡಲಾಗಿದೆ. ಇದೇ ತಿಂಗಳ11ರಿಂದ ಉಚಿತ ಬಸ್ ಪ್ರಯಾಣ ಯೋಜನೆ ಜಾರಿಯಾಗಲಿದೆ. ರಾಜ್ಯದ ಯಾವ ಜಾಗಕ್ಕಾದರೂಉಚಿತವಾಗಿ ಓಡಾಟ ಮಾಡಬಹುದಾಗಿದ್ದು, ಎಸಿ , ಎಸಿ ಸ್ಲೀಪರ್ ಬಸ್ ಗಳಲ್ಲಿ ಉಚಿತ ಯೋಜನೆ ಅನ್ವಯವಾಗೋದಿಲ್ಲ ಎಂದು ತಿಳಿಸಿದ್ದಾರೆ.
ಯೋಜನೆ 3 ಯುವನಿಧಿ
ಯುವನಿಧಿ ಯೋಜನೆ ಅಡಿ ಎಲ್ಲ ಪ್ರತಿ ತಿಂಗಳು ಪಧವಿದದರಿಗೆ 3 ಸಾವಿರ, ಡಿಪ್ಲೊಮಾದವರಿಗೆ 1.500 ಸಾವಿರ 24 ತಿಂಗಳು ನೀಡಲು ಸಚಿವ ಸಂಪುಟ ಸಭೆ ಅನುಮತಿ ನೀಡಿದೆ ಆದರೆ ಯಾರು 24 ತಿಂಗಳೊಳಗೆ ಸರ್ಕಾರಿ ಅಥವಾ ಖಾಸಗಿ ಕಂಪನಿಗಳಿಗೆ ಕೆಲಸಕ್ಕೆ ಸೇರಿದರೆ ಅವರಿಗೆ ಯೋಜನೆ ಅನ್ವಯವಾಗೋದಿಲ್ಲ ಅಂತ ತಿಳಿಸಿದ್ದಾರೆ.
ಯಾರೆಲ್ಲಾ ನಿರುದ್ಯೋಗಿಗಳು ಇದ್ದಾರೋ ಅವರೆಲ್ಲರೂ ಅರ್ಜಿ ಸಲ್ಲಿಸಬೇಕಾಗಿದೆ.
ಯೋಜನೆ 4 ಉಚಿತ ಅಕ್ಕಿ ನೀಡಿಕೆ
ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ದಾರರಿಗೆ 10 ಕೆಜಿ ಅಕ್ಕಿ ನೀಡಲು ಕ್ಯಾಬಿನೆಟ್ ತೀರ್ಮಾನ ಮಾಡಿದೆ ಎಂದು ಸಿಎಂ ತಿಳಿಸಿದರು. ಜುಲೈ 1 ರಿಂದ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ದಾರರಿಗೆ ‘ಅನ್ನಭಾಗ್ಯ’ ಯೋಜನೆಯಡಿ 10 ಕೆಜಿ ಅಕ್ಕಿ ನೀಡಲಾಗುತ್ತೆ ಎಂದು ಮಾಹಿತಿ ನೀಡಿದರು.
ಯೋಜನೆ 5 ಯೋಜನೆ ಗೃಹ ಲಕ್ಷ್ಮೀ
ಮತ್ತೊಂದು ಮಹತ್ವದ ಯೋಜನೆ ಅಂದರೆ ಮನೆಯೊಡತಿಗೆ ಪ್ರತಿ ತಿಂಗಳು 2000 ಸಾವಿರ ನೀಡಿಕೆಗೂ ಕ್ಯಾಬಿನೆಟ್ ಅನುಮೋದನೆ ನೀಡಿದೆ. ಗೃಹಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳು ಮನೆಯ ಯಜಮಾನಿಯ ಅಕೌಂಟ್ ಗೆ 2 ಸಾವಿರ ರೂಪಾಯಿ ನೀಡುತ್ತೇವೆ ಎಂದು ಮಾಹಿತಿ ನೀಡಿದ ಸಿಎಂ, ಮನೆ ಯಜಮಾನಿಯಾದವರು ಅರ್ಜಿ ಸಲ್ಲಿಕೆ ಮಾಡಬೇಕು. ಜೂನ್ 15 ರಿಂದ ಜುಲೈ 15 ರ ವರೆಗೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಆಗಸ್ಟ್ 15 ರಂದು ಗೃಹಲಕ್ಷ್ಮಿ ಯೋಜನೆಯನ್ನ ಲಾಂಚ್ ಮಾಡಿ ಫಲಾನುಭವಿಗಳಿಗೆ ಹಣ ವರ್ಗಾವಣೆ ಮಾಡುತ್ತೇವೆ ಎಂದು ತಿಳಿಸಿದರು.
ಮನೆ ಯಜಮಾನಿ ಕಡ್ಡಾಯವಾಗಿ ಆಧಾರ್ ಕಾರ್ಡ್, ಬ್ಯಾಂಕ್ ಅಕೌಂಟ್ ಪಾಸ್ ಬುಕ್ ಜೆರಾಕ್ಸ್ ನೀಡಬೇಕು. ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ದಾರರಿಗೂ ಕೂಡ ಈ ಯೋಜನೆ ಅನ್ವಯವಾಗಲಿದೆ.