ಬೆಂಗಳೂರು, (www.thenewzmirror.com) ;
ರಾಜ್ಯದಲ್ಲಿ ಕಂಡಿಷನ್ ಇಲ್ಲದೆ ವಿವಿಧ ಗ್ಯಾರಂಟಿಗಳ ಅನುಷ್ಠಾನಕ್ಕೆ ಆಗ್ರಹಿಸಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸ್ತು.
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾಜಿ ಸಿಎಂ ರಾಜಾಹುಲಿ ಸರ್ಕಾರದ ವಿರುದ್ಧ ಗುಡುಗಿದರು.
ರಾಜ್ಯದ ಕಾಂಗ್ರೆಸ್ ಸರಕಾರವು ತನ್ನ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಕಂಡಿಷನ್ ಇಲ್ಲದೆ ಗ್ಯಾರಂಟಿ ಜಾರಿ ಮಾಡಲು ಇದೇ ವೇಳೆ ಆಗ್ರಹಿಸಲಾಯ್ತು.





ವಿದ್ಯುತ್ ದರ ಹೆಚ್ಚಳವನ್ನು ಯಥಾಸ್ಥಿತಿಗೆ ತರಬೇಕು; 10 ಕೆಜಿ ಅಕ್ಕಿ ಕೊಡುವ ಭರವಸೆಯನ್ನು ಯಥಾವತ್ ಜಾರಿ ಮಾಡಬೇಕು ಎಂದು ಆಗ್ರಹಿಸಲಾಯಿತು. ಕಾಂಗ್ರೆಸ್ ಸರಕಾರದ ಸುಳ್ಳು ಭರವಸೆಗಳ ವಿರುದ್ಧ ಘೋಷಣೆ ಕೂಗಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್‍ಕುಮಾರ್ ಕಟೀಲ್, ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಂಸದ ಡಿ.ವಿ. ಸದಾನಂದಗೌಡ, ಮಾಜಿ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಸಚಿವರಾದ ಗೋವಿಂದ ಕಾರಜೋಳ, ಮುರುಗೇಶ್ ನಿರಾಣಿ, ಬಿ.ಸಿ.ನಾಗೇಶ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.