KSRTC ಹೆಸರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯದ್ದೇ..!

ಬೆಂಗಳೂರು, (www.thenewzmirror.com);

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ  ಕೆ‌ ಎಸ್ ಆರ್ ಟಿ ಸಿ ಹೆಸರು‌ ಬಳಕೆಗೆ ಯಾವುದೇ ಅಭ್ಯಂತರವಿಲ್ಲ ಎಂದು ಮದ್ರಾಸ್ ಹೈಕೋರ್ಟ್ ತಿಳಿಸಿದ್ದು, ಕೇರಳ ರಸ್ತೆ ಸಾರಿಗೆ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನ ವಜಾ ಮಾಡಿದೆ.

RELATED POSTS

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ‘ಕೆಎಸ್ಆರ್ ಟಿ ಸಿ’ಎಂದು ಸಂಕ್ಷಿಪ್ತ ಬಳಕೆಗಾಗಿ ಟ್ರೇಡ್ ಮಾರ್ಕ್ ಪ್ರಮಾಣಪತ್ರವನ್ನು ನೀಡಲು ಅರ್ಜಿ ಸಲ್ಲಿಸಿದ್ದು ಭಾರತ ಸರ್ಕಾರದ ಟ್ರೇಡ್ ಮಾರ್ಕ್ ರಿಜಿಸ್ಟ್ರಿಯಿಂದ 2013 ರಲ್ಲಿ ಟ್ರೇಡ್ ಮಾರ್ಕ್ ಪ್ರಮಾಣಪತ್ರಗಳನ್ನು ಸಂಸ್ಥೆಯು ದಿನಾಂಕ 1.11.1973 ಯಿಂದ ಬಳಸುತ್ತಿರುವುದನ್ನು ಮಂಜೂರು ಮಾಡಲಾಗಿರುತ್ತದೆ. ಭಾರತ ಸರ್ಕಾರದ ರಿಜಿಸ್ಟ್ರಾರ್ ಆಫ್ ಕಾಪಿ ರೈಟ್ಸ್, ರವರಿಂದ ‘KSRTC’ ಲೋಗೋ ಮತ್ತು ‘ಗಂಡಭೇರುಂಡ ಗುರುತು’ ಬಳಕೆಗಾಗಿ ಕಾಪಿ ರೈಟ್ ನ್ನು ಸಹ ಪಡೆಯಲಾಗಿರುತ್ತದೆ.

ಇದಾದ ನಂತರ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಚೆನ್ನೈನಲ್ಲಿರುವ ಬೌದ್ಧಿಕ ಆಸ್ತಿ ಮೇಲ್ಮನವಿ ಮಂಡಳಿಯ(Intellectual  Property Appellate Board) ಮುಂದೆ ಇದನ್ನು ಪ್ರಶ್ನಿಸಿದೆ. ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ   ಸಂಸ್ಥೆಯು 42 ವರ್ಷಗಳಿಂದ KSRTC ಹೆಸರನ್ನು ಬಳಸುತ್ತಿರುವ ಬಗ್ಗೆ ತಿಳಿದಿರುತ್ತದೆ .ಆದ್ದರಿಂದ KSRTCಯು ಪಡೆದಿರುವ  ಟ್ರೇಡ್ ಮಾರ್ಕ್ ನೋಂದಣಿ ಅಮಾನ್ಯವಾಗಿದೆ ಎಂದು ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ ಎಂದು KSRTC ವಾದಿಸಿದೆ.

ಕೇರಳ KRTC ಕೂಡ 2019 ರಲ್ಲಿ KSRTC ಗೂ ಹಿಂದಿನಿಂದ  ಸಂಕ್ಷಿಪ್ತ ಹೆಸರನ್ನು ಬಳಸುತ್ತಿರುವ ಕುರಿತು  ನೋಂದಣಿಯನ್ನು ಪಡೆದುಕೊಂಡಿದೆ.

ನಂತರ ಕೇಂದ್ರ ಸರ್ಕಾರವು ಐಪಿಎಬಿಯನ್ನು ರದ್ದುಗೊಳಿಸಿದ್ದು ಐಪಿಎಬಿ ಮುಂದೆ ಬಾಕಿ ಉಳಿದಿದ್ದ ಪ್ರಕರಣಗಳನ್ನು ಚೆನ್ನೈನಲ್ಲಿರುವ ಮದ್ರಾಸ್ ಹೈಕೋರ್ಟ್ಗೆ ವರ್ಗಾಯಿಸಲಾಯಿತು.           
ಈ ಪ್ರಕರಣವು ದಿನಾಂಕ 12.12.2023 ರಂದು ಮದ್ರಾಸ್ ಹೈಕೋರ್ಟ್ ಮುಂದೆ ಬಂದಿದ್ದು, ಕೇರಳ RTC ಸಲ್ಲಿಸಿದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.

ಕೇರಳ RTC  ಸಲ್ಲಿಸಿದ ಪ್ರಕರಣವನ್ನು ಮದ್ರಾಸ್ ಹೈಕೋರ್ಟ್  ವಜಾಗೊಳಿಸಿರುವ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ‌ (ಕೆ ಎಸ್ ಆರ್ ಟಿ ಸಿ) ಪ್ರಸಕ್ತ ಹಾಗೂ ಮುಂಬರುವ ದಿನಗಳಲ್ಲಿ ಸಹ “ಕೆಎಸ್ಆರ್ ಟಿ ಸಿ” ಹೆಸರನ್ನು ಬಳಸಲು ಯಾವುದೇ ಕಾನೂನು ಅಡಚಣೆಯಿರುವುದಿಲ್ಲ.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist