ಕೆಂಪೇಗೌಡ ಥೀಮ್ ಪಾರ್ಕ್ ಯೋಜನೆಗೆ ಅಂತಿಮ ರೂಪ: ಡಿಸಿಎಂ ಡಿಕೆ ಶಿವಕುಮಾರ್

RELATED POSTS

ಬೆಂಗಳೂರು(www.thenewzmirror.com): ನಾಡಪ್ರಭು ಕೆಂಪೇಗೌಡ ಥೀಮ್ ಪಾರ್ಕ್ ಯೋಜನೆಗೆ ಅನುದಾನ ಸಿಕ್ಕಿರಲಿಲ್ಲ. ಈಗ ಅದನ್ನು ಸರಿಪಡಿಸಲಾಗಿದ್ದು, ಮುಂದಿನ 3-4 ತಿಂಗಳಲ್ಲಿ ಅಂತಿಮ ರೂಪ ನೀಡಲಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಕೆಂಪೇಗೌಡ ಜಯಂತಿ ಅಂಗವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ ನಾಡಪ್ರಭು ಕೆಂಪೇಗೌಡ ಪ್ರತಿಮೆ, ಬಿಬಿಎಂಪಿ ಕಚೇರಿ ಮುಂಭಾಗದ ಪ್ರತಿಮೆ ಹಾಗೂ ವಿಧಾನಸೌಧ ಆವರಣದಲ್ಲಿರುವ ಪ್ರತಿಮೆಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಪುಷ್ಪನಮನ ಸಲ್ಲಿಸಿದರು.

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಮಾತನಾಡಿದ ಅವರು, “ಕೆಂಪೇಗೌಡರು ಬೆಂಗಳೂರು ಕಟ್ಟದಿದ್ದರೆ, ನಾವು ನೀವು ಇಲ್ಲಿ ಇರುತ್ತಿರಲಿಲ್ಲ. ಇಲ್ಲಿನ ವಾತಾವರಣ ಮನಗಂಡು ಕೆಂಪೇಗೌಡರು ಈ ನಗರ ಕಟ್ಟಿದ ಪರಿಣಾಮ ರಾಜ್ಯ, ದೇಶ ಹಾಗೂ ವಿದೇಶಗಳ ಜನ ಇಲ್ಲಿ ಆಶ್ರಯ ಪಡೆಯುತ್ತಿದ್ದಾರೆ” ಎಂದು ತಿಳಿಸಿದರು.

“ಈ ಹಿಂದಿನ ಸರ್ಕಾರದಲ್ಲಿ ಈ ಪ್ರತಿಮೆ ನಿರ್ಮಾಣ ಮಾಡಿದಾಗ ನಾನು ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ. ಎಸ್.ಎಂ ಕೃಷ್ಣ ಅವರ ಕಾಲದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ಪ್ರಾರಂಭಿಸಿದಾಗ, ಯೋಜನಾ ಪ್ರಾಧಿಕಾರ, ನಕ್ಷೆ ಸೇರಿದಂತೆ ಅನೇಕ ತೀರ್ಮಾನ ಮಾಡಿದ್ದೆ. ಆಗ ನಗರಾಭಿವೃದ್ಧಿ ಸಚಿವನಾಗಿ ನಾನು ಹಾಕಿದ ಕೊನೆ ಸಹಿ ಈ ವಿಮಾನ ನಿಲ್ದಾಣ” ಎಂದು ಮೆಲುಕು ಹಾಕಿದರು. 

“ಕೆಂಪೇಗೌಡ ಜಯಂತಿ ಅಂಗವಾಗಿ ನಿಮ್ಮೆಲ್ಲರಿಗೂ ಅಭಿನಂದನೆಗಳು. ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದಿಂದ ನೀಡುವ ಕೆಂಪೇಗೌಡ ಪ್ರಶಸ್ತಿಗೆ ಈ ವರ್ಷ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೂ ಲಭಿಸಿದೆ. ಪ್ರಾಧಿಕಾರಕ್ಕೆ ಅಭಿನಂದನೆಗಳು” ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು” ಎಂದು ತಿಳಿಸಿದರು.

ಕೆಂಪೇಗೌಡ ಥೀಮ್ ಪಾರ್ಕ್ ಯೋಜನೆ ಜವಾಬ್ದಾರಿಯನ್ನು ಕೃಷ್ಣ ಭೈರೇಗೌಡ ಅವರು ವಹಿಸಿಕೊಂಡಿದ್ದಾರೆ. ಈ ಯೋಜನೆಗೆ ಅನುದಾನ ಸಿಕ್ಕಿರಲಿಲ್ಲ. ಈಗ ಅದನ್ನು ಸರಿಪಡಿಸಲಾಗಿದ್ದು, ಮುಂದಿನ 3-4 ತಿಂಗಳಲ್ಲಿ ಅಂತಿಮ ರೂಪ ನೀಡಲಾಗುವುದು, ಕೆಂಪೇಗೌಡ ಜಯಂತಿ ಆಚರಣೆ ಆರಂಭಿಸಿದ್ದು ನಾವೇ, ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿದ್ದು ನಾವೇ, ಇದಕ್ಕೆ 5 ಎಕರೆ ಜಾಗವನ್ನು ನೀಡಿದ್ದೇವೆ ಎಂದು ತಿಳಿಸಿದರು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist