ಬೆಂಗಳೂರು/ಮಂಡ್ಯ, (www.thenewzmirror.com) ;
ಮುಖ್ಯಮಂತ್ರಿ ಆದ ಮೇಲೆ ಕೆಆರ್ ಎಸ್ ಜಲಾಶಯ ಭರ್ತಿಯಾದ ಹಿನ್ನಲೆಯಲ್ಲಿ ಇಂದು ಕೆಆರ್ ಎಸ್ ಗೆ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರೀಕ್ಷೆಗೂ ಮೀರಿ ಮಳೆಯಾಗುತ್ತಿದೆ. ಹೀಗಾಗಿ ಕೆಆರ್ ಎಸ್ ಡ್ಯಾಂಗೆ ಒಳಹರಿವಿನ ಪ್ರಮಾಣವೂ ಹೆಚ್ಚಾಗಿದ್ದು, ಅವಧಿಗೂ ಮುನ್ನವೇ ಜಲಾಶಯ ಭರ್ತಿಯಾಗಿದೆ. ಅಪಾಯದ ಮಟ್ಟ ಮೀರಿರೋ ಹಿನ್ನಲೆಯಲ್ಲಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಈಗಾಗಲೇ ಎಚ್ಚರಿಕೆ ಕೊಟ್ಟಿದ್ದು, ಹೆಚ್ಚಿನ ಪ್ರಮಾಣದಲ್ಲಿ ನೀರನ್ನ ಹರಿಬಿಡಲಾಗುತ್ತಿದೆ.
ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಆರ್ ಎಸ್ ಡ್ಯಾಂಗೆ ಇಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಸಚಿವರಾದಿಯಾಗಿ ಬಾಗಿನ ಅರ್ಪಿಸೋ ಕಾರ್ಯಕ್ರಮ ಆಯೋಜಿಸಲಾಗಿದೆ.
ಸಿಎಂ, ಡಿಸಿಎಂ ಕಾವೇರಿಗೆ ಬಾಗಿನ ಅರ್ಪಿಸುವ ಕಾರ್ಯಕ್ರಮದ LIVE LINK ಇಲ್ಲಿದ್ದು, ಒಂದು ಕ್ಲಿಕ್ ಮಾಡಿದ್ರೆ ಕೆಆರ್ ಎಸ್ ಡ್ಯಾಂನ ಮನಮೋಹಕ ದೃಶ್ಯ ಹಾಗೂ ಬಾಗಿನ ಅರ್ಪಿಸುವ ಕಾರ್ಯಕ್ರಮವನ್ನ ಕುಳಿತಲ್ಲಿಯೇ ವೀಕ್ಷಿಸಬಹುದು.
ಜೀವನದಿ ಕಾವೇರಿ ಎರಡು ವರ್ಷಗಳ ನಂತರ ಭರ್ತಿಯಾಗಿದ್ದು, ಬೆಂಗಳೂರು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದ ಜನರಲ್ಲಿ ಸಂತಸ ಮನೆ ಮಾಡಿದೆ. ಸಿದ್ದರಾಮಯ್ಯ ಸಿಎಂ ಆಗಿ ಕಾವೇರಿಗೆ ಬಾಗಿನ ಅರ್ಪಣೆ ಮಾಡುತ್ತಿರುವುದು ಇದು ಮೂರನೇ ಬಾರಿಯಾಗಿದೆ. ಈ ಹಿಂದೆ ಅಂದ್ರೆ ಮೊದಲ ಬಾರಿಗೆ ಸಿಎಂ ಆಗಿದ್ದಾಗ 2013 ಮತ್ತು 2014 ರಲ್ಲಿ ಬಾಗಿನ ಅರ್ಪಿಸಿದ್ದರು. ಇದೀಗ ಹತ್ತು ವರ್ಷಗಳ ನಂತರ ಮತ್ತೆ ಬಾಗಿನ ಅರ್ಪಣೆ ಮಾಡಲಿದ್ದಾರೆ.
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಕೆಆರ್ಎಸ್ ಜಲಾಶಯದಲ್ಲಿ ಬಾಗಿನ ಅರ್ಪಿಸಲಿದ್ದಾರೆ. ಬಳಿಕ ಕಾವೇರಿ ಮಾತೆಗೆ ಪೂಜೆ ಸಲ್ಲಿಸಲಿದ್ದಾರೆ.