ಬೆಂಗಳೂರು, (www.thenewzmirror.com);
ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿಗೆ ಹಿರಿಯ ಕಾರ್ಯನಿರ್ವಾಹಕ ಉಪಾಧ್ಯಕ್ಷರಾಗಿ ಡಾ. ಲತಾ ಆಯ್ಕೆಯಾಗಿದ್ದಾರೆ. ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿಯ ಮುಖ್ಯಸ್ಥರು ಹಾಗೂ ಗೌರವಾಧ್ಯಕ್ಷ ಎಂ. ಬಿ. ಜಯರಾಂ ಮಾಹಿತಿ ನೀಡಿದ್ದಾರೆ.
ಪ್ರಸ್ತುತದಲ್ಲಿ ಡಾ. ಲತಾ KSRTCಯಲ್ಲಿ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಮತ್ತು ಮಂಡಳಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿಯು ದೇಶದ್ಯಾಂತ 85 ಶಾಖೆಗಳನ್ನು, ಅಂತರರಾಷ್ಟ್ರೀಯ ಶಾಖೆಗಳಾದ ಸಿಂಗಾಪುರ್, ಲಂಡನ್, ಶ್ರೀಲಂಕಾ, ದುಬೈ, ನೇಪಾಳ, ಆಸ್ಟ್ರೇಲಿಯಾ, ಅಮೆರಿಕಾಗಳಲ್ಲಿ ಹೊಂದಿದೆ. ಇದರ ಜತೆಗೆ YCC Young Communicators Club of PRCI ದೇಶದ್ಯಾಂತ 70 ಕ್ಕೂ ಹೆಚ್ಚು ಕಾಲೇಜುಗಳಲ್ಲಿ ತನ್ನ ವ್ಯಾಪ್ತಿಯನ್ನು ವಿಸ್ತರಿಸಿದೆ.
ಡಾ. ಲತಾ ಅವರಿಗೆ ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿಯ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ಗೀತಾ ಶಂಕರ್ ಅಭಿನಂದನೆ ಸಲ್ಲಿಸಿದ್ದಾರೆ.