KSRTC NEWS | KSRTC ಗೆ ಇಂದು ಶುಭ ಶುಕ್ರವಾರ, ವಿವಿಧ ವಿಭಾಗಗಳಲ್ಲಿ ರಾಷ್ಟ್ರಮಟ್ಟದ ಪ್ರಶಸ್ತಿ ಸೇರಿ 16 ಪ್ರಶಸ್ತಿ ತನ್ನದಾಗಿಸಿಕೊಂಡ ನಿಗಮ..!

ksrtc logo

ಬೆಂಗಳೂರು, (www.thenewzmirror.com) ;

ದೇಶದಲ್ಲೇ ನಂಬರ್ ಓನ್ ಸಾರಿಗೆ ಸಂಸ್ಥೆ ಕಳೆದ ಹಲವು ವರ್ಷಗಳಿಂದ ಪ್ರಯಾಣಿಕರಿಗೆ ಉತ್ತಮ ಹಾಗೂ ಗುಣಮಟ್ಟದ ಸೇವೆ ನೀಡ್ತಾ ಬರ್ತಿದೆ. ನಿಗಮದ ಈ ಸೇವೆ ರಾಜ್ಯ ಅಷ್ಟೇ ಅಲ್ಲ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಪ್ರಶಸ್ತಿಗಳು ಅರಸಿ ಬರ್ತಿವೆ.. ಇದೀಗ ಈ ಲೀಸ್ಟ್ ಗೆ ಮತ್ತೆ 16 ಪ್ರಶಸ್ತಿಗಳನ್ನ ತನ್ನ ಮುಡಿಗೇರಿಸಿಕೊಂಡಿದೆ.

RELATED POSTS

KSRTC ಗೆ ರಾಷ್ಟ್ರದ ಮಟ್ಟದ 8 ವೀಡಿಯಾ – ViDEA, 5 ಎಮ್ಕ್ಯೂಬ್ – mCUBE ಮತ್ತು 2 ಸ್ಕಾಚ್ ಆರ್ಡರ್ ಆಫ್ ಮೆರಿಟ್ ಮತ್ತು 1 ಸ್ಕಾಚ್ ಪ್ರಶಸ್ತಿಗಳು ಲಭಿಸಿದೆ. ನಿಗಮ ಸಾರಿಗೆ ಸಂಜೀವಿನಿ- ನೌಕರರ ಹೃದಯ ರೋಗ ತಪಾಸಣೆಗಾಗಿ ಮತ್ತು ರಸ್ತೆ ಸುರಕ್ಷತೆ ಉಪಕ್ರಮ ಗಳಿಗಾಗಿ 2 ಸ್ಕೋಚ್ ಆರ್ಡರ್ ಆಫ್ ಮೆರಿಟ್ ಪ್ರಶಸ್ತಿಗಳನ್ನು ಮತ್ತು 1 ಸ್ಕೋಚ್ ಪ್ರಶಸ್ತಿಗಳನ್ನು ಗುರುಗಾಂವ್ ನಲ್ಲಿ, ಪ್ರದಾನ ಮಾಡಲಾಯಿತು. ಸ್ಕೋಚ್ ಆರ್ಡರ್ ಆಫ್ ಮೆರಿಟ್ ಪ್ರಶಸ್ತಿಗಳನ್ನು ಆನ್ ಲೈನ್ ನಲ್ಲಿ ಪ್ರದಾನ ಮಾಡಲಾಯಿತು. ಹಾಗೆನೇ ಸ್ಕೋಚ್ ಪ್ರಶಸ್ತಿ ಸಮಾರಂಭವು 2024 ಸೆಪ್ಟೆಂಬರ್ 21ರಂದು ನವದೆಹಲಿಯಲ್ಲಿ ನಡೆಯಲಿದೆ ಎಂದು ಕೆಎಸ್ ಆರ್ ಟಿಸಿ ಮೂಲಗಳು ತಿಳಿಸಿವೆ.

KSRTCಗೆ ವೀಡಿಯಾ ಪ್ರಶಸ್ತಿ ಲಭಿಸಿದ ವಿಭಾಗಗಳು

1. ಪಲ್ಲಕ್ಕಿ ಬ್ರಾಂಡಿಂಗ್ ಗಾಗಿ ಪ್ರಾಡಕ್ಟ್ ಪ್ಲೇಸ್ಮೆಂಟ್ನಲ್ಲಿ ಅತ್ಯುತ್ತಮ ವೀಡಿಯೊ ಕಂಟೆಂಟ್.

2. ಅಶ್ವಮೇಧ ಬ್ರಾಂಡಿಂಗ್ ಗಾಗಿ ಕಡಿಮೆ ಬಜೆಟ್ ಮಾರ್ಕೆಟಿಂಗ್ ಕ್ಯಾಂಪೇನ್ (ಆಫ್ಲೈನ್) ನಲ್ಲಿ ಅತ್ಯುತ್ತಮ ವೀಡಿಯೊ ಕಂಟೆಂಟ್.

3. ಶಕ್ತಿ ಯೋಜನೆಗೆ ಪ್ರವಾಸ ಮತ್ತು ಪ್ರಯಾಣ ಸಂಸ್ಥೆಯಿಂದ ಪಾರಂಪರಿಕ ಮಾಧ್ಯಮ ಪ್ರಚಾರಕ್ಕಾಗಿ ಅತ್ಯುತ್ತಮ ವೀಡಿಯೊ ಕಂಟೆಂಟ್.

4. ಅಶ್ವಮೇಧ ಬ್ರಾಂಡಿಂಗ್ ಗಾಗಿ ಪ್ರವಾಸ ಮತ್ತು ಪ್ರಯಾಣ ಸಂಸ್ಥೆಯಿಂದ ಬಹುಮಾಧ್ಯಮ ಪ್ರಚಾರಕ್ಕಾಗಿ ಅತ್ಯುತ್ತಮ ವೀಡಿಯೊ ಕಂಟೆಂಟ್.

5. ಪಲ್ಲಕ್ಕಿ ಬ್ರಾಂಡಿಂಗ್ ಗಾಗಿ ಪ್ರವಾಸ ಮತ್ತು ಪ್ರಯಾಣ ಸಂಸ್ಥೆಯಿಂದ ಡಿಜಿಟಲ್ ಕ್ಯಾಂಪೇನ್ ನಲ್ಲಿ ಅತ್ಯುತ್ತಮ ವೀಡಿಯೊ ಕಂಟೆಂಟ್.

6. ಅಂಬಾರಿ ಉತ್ಸವದ ಬ್ರಾಂಡಿಂಗ್ ಗಾಗಿ ಇನ್ಸ್ಟಾಗ್ರಾಮ್ ಕ್ಯಾಂಪೇನ್ನಲ್ಲಿ ಅತ್ಯುತ್ತಮ ವೀಡಿಯೊ ಕಂಟೆಂಟ್.

7. ಅಶ್ವಮೇಧ ಬ್ರಾಂಡಿಂಗ್ ಗಾಗಿ ಮೊಬೈಲ್ ಮಾರ್ಕೆಟಿಂಗ್ ಕ್ಯಾಂಪೇನ್ – ಒಟ್ಟಾರೆ ಅತ್ಯುತ್ತಮ ವೀಡಿಯೊ ಕಂಟೆಂಟ್.

8. ಶ್ರೇಷ್ಠ ವೀಡಿಯೊ ಕಂಟೆಂಟ್ ಬ್ರಾಂಡ್ಸ್ ಎಂಟರ್ಪ್ರೈಸ್ – KSRTC.

ಎಮ್ಕ್ಯೂಬ್ ಪ್ರಶಸ್ತಿ ಲಭಿಸಿದ ವಿಭಾಗಗಳು

1. ಬ್ರಾಂಡಿಂಗ್ ಗಾಗಿ ಶ್ರೇಷ್ಠ ಪಿಆರ್ ಕ್ಯಾಂಪೇನ್.

2. ಬ್ರಾಂಡಿಂಗ್ ಗಾಗಿ ಕಡಿಮೆ ಬಜೆಟ್ ಮಾರ್ಕೆಟಿಂಗ್ ಕ್ಯಾಂಪೇನ್ (ಆಫ್ಲೈನ್).

3. ಪ್ರವಾಸ ಮತ್ತು ಪ್ರಯಾಣದ ಶ್ರೇಷ್ಠ ಎಟಿಎಲ್ ಕ್ಯಾಂಪೇನ್.

4. ಶಕ್ತಿ ಯೋಜನೆಗಾಗಿ ಶ್ರೇಷ್ಠ ಬ್ರಾಂಡ್ ಕಂಟೆಂಟ್.

5. ಬ್ರಾಂಡಿಂಗ್ ಗಾಗಿ ಶ್ರೇಷ್ಠ ಆನ್ಲೈನ್ ಪಿಆರ್ ಕ್ಯಾಂಪೇನ್.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist