ಬೆಂಗಳೂರು, (www.thenewzmirror.com) ;
ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಎಲ್ ಕೆ ಅಡ್ವಾಣಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
96 ವರ್ಷದ ಅಡ್ವಾಣಿ ಅವರು ಈ ಹಿಂದೆ ಅಂದರೆ ಜುಲೈ ಮೊದಲ ವಾರದಲ್ಲಿ ಅಡ್ವಾಣಿ ಆಸ್ಪತ್ರೆಗೆ ದಾಖಲಾಗಿದ್ರು. ಆಸ್ಪತ್ರೆಯಲ್ಲಿ ಗುಣಮುಖರಾದ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು.
ನರವಿಜ್ಞಾನ ವಿಭಾಗದ ಹಿರಿಯ ಸಲಹೆಗಾರ ಡಾ.ವಿನಿತ್ ಸೂರಿ ಅವರ ನೇತೃತ್ವದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿತ್ತು.