ಬೆಂಗಳೂರು, (www.thenewzmirror.com) :
ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ಆರಂಭಿಸಿದ್ದು, ಎರಡನೇ ಪಟ್ಟಿಬಿಡುಗಡೆ ಮಾಡಿದೆ. ಕಾಂಗ್ರೆಸ್ ನ ಎರಡನೇ ಪಟ್ಟಿಯಲ್ಲಿ 43 ಆಭ್ಯರ್ಥಿಗಳನ್ನ ಘೋಷಣೆ ಮಾಡಲಾಗಿದೆ.
ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅಸ್ಸಾಂ, ಗುಜರಾತ್, ಮಧ್ಯಪ್ರದೇಶ, ಉತ್ತರಾಖಂಡ್, ರಾಜಸ್ಥಾನ ಮತ್ತು ಕೇಂದ್ರಾಡಳಿತ ಪ್ರದೇಶವಾದ ದಿಯು ಮತ್ತು ದಮನ್ ಸೇರಿದಂತೆ ವಿವಿಧ ರಾಜ್ಯಗಳಲ್ಲಿ 43 ಅಭ್ಯರ್ಥಿಗಳನ್ನು ಘೋಷಿಸಿದ್ದಾರೆ.
ಕಮಲ್ ನಾಥ್ ಅವರ ಪುತ್ರ ನಕುಲ್ ನಾಥ್ ಸೇರಿದಂತೆ 43 ಅಭ್ಯರ್ಥಿಗಳ ಪಟ್ಟಿಬಿಡುಗಡೆ ಮಾಡಲಾಗಿದೆ.
ಮೊದಲ ಪಟ್ಟಿಯಲ್ಲಿ ಕಾಂಗ್ರೆಸ್ 39 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಹೆಸರನ್ನ ಘೋಷಿಸಿತ್ತು. ಮೊದಲ ಪಟ್ಟಿಯಲ್ಲಿ ರಾಹುಲ್ ಗಾಂಧಿ ಅವರ ಹೆಸರೂ ಇದ್ದು, ವಯನಾಡ್’ನಿಂದ ಸ್ಪರ್ಧಿಸಲಿದ್ದಾರೆ. ಇವರಲ್ಲದೆ, ಶಶಿ ತರೂರ್ ತಿರುವನಂತಪುರಂನಿಂದ ಮತ್ತು ಭೂಪೇಶ್ ಬಘೇಲ್ ರಾಜನಂದಗಾಂವ್ನಿಂದ ಸ್ಪರ್ಧಿಸಲಿದ್ದಾರೆ.
ಕಾಂಗ್ರೆಸ್ ಆಭ್ಯರ್ಥಿಗಳ 2ನೇ ಪಟ್ಟಿ ಹೀಗಿದೆ.

