ಬೆಂಗಳೂರು, (www.thenewzmirror.com) :
ಬೆಂಗಳೂರು ವಿಶ್ವವಿದ್ಯಾಲಯದ ವತಿಯಿಂದ ವಿಶೇಷ ಮತದಾರರ ನೋಂದಣಿ ಅಭಿಯಾನ ಆಯೋಜಿಸಲಾಗಿತ್ತು. ಲೋಕಸಭೆ ಚುನಾವಣೆ ಹೊತ್ತಲ್ಲೇ ಮತದಾನದ ಅರಿವು ಮೂಡಿಸುವ ನಿಟ್ಟಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿವಿಯ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಜ್ಞಾನಭಾರತಿ ಆವರಣದ ಹೆಚ್ ಎನ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಸಂಯೋಜಿತ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಸ್ಥಳೀಯರಿಗೆ ಮತದಾನದ ಕುರಿತು ವಿಶೇಷ ಜಾಗೃತಿ ಮೂಡಿಸಲಾಯಿತು. ಬಿಬಿಎಂಪಿ ನೋಡಲ್ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ಮತ್ತು ಸ್ಥಳೀಯರಿಗೆ ಮತದಾನದ ಪ್ರಕ್ರಿಯೆ ಬಗ್ಗೆ ವಿವರಿಸಿದರು.
ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯುವ ಮತದಾನದ ಮಹತ್ವದ ಕುರಿತು ವಿದ್ಯಾರ್ಥಿಗಳಲ್ಲಿ ವಿಸ್ತಾರವಾಗಿ ಅರಿವು ಮೂಡಿಸಲಾಯಿತು. ಮತದಾನ ಪ್ರಕ್ರಿಯೆಗೆ ನೊಂದಯಿಸಿಕೊಳ್ಳುವವರಿಗೆ ಮಾರ್ಗದರ್ಶನ ಮಾಡಲಾಯಿತು. ಬಿಬಿಎಂಪಿ ಅಧಿಕಾರಿಗಳು ನೋಂದಣಿ ಪ್ರಕ್ರಿಯೆಗೆ ವಿದ್ಯಾರ್ಥಿಗಳನ್ನು ನೊಂದಾಯಿಸಿಕೊಳ್ಳಲು ಸಹಕರಿಸಿದರು.