ಬೆಂಗಳೂರು, (www.thenewzmirror.com) :
ಲೋಕಸಭೆ ಚುನಾವಣೆಗೆ ಬಿಜೆಪಿ ತನ್ನ ಎರಡನೇ ಪಟ್ಟಿ ರಿಲೀಸ್ ಮಾಡಿದೆ. ಮೈಸೂರಿನಲ್ಲಿ ರಾಜವಂಶಸ್ಥ ಯದುವೀರ್, ಬೆಂಗಳೂರು ಗ್ರಾಮಾಂತರದಲ್ಲಿ ಜಯದೇವ ಆಸ್ಪತ್ರೆ ಮಾಜಿ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್, ಬೆಂಗಳೂರು ಉತ್ತರದಲ್ಲಿ ಶೋಭಾ ಕರಂದ್ಲಾಜೆ, ದಾವಣಗೆರೆಯಲ್ಲಿ ಸಿದ್ದೇಶ್ವರ ಪತ್ನಿ ಗಾಯತ್ರಿ ಸಿದ್ದೇಶ್ವರ್, ತುಮಕೂರಿನಲ್ಲಿ ವಿ ಸೋಮಣ್ಣಗೆ ಟಿಕೆಟ್ ಘೋಷಣೆ ಮಾಡಲಾಗಿದೆ.
ಕರ್ನಾಟಕ 20 ಅಭ್ಯರ್ಥಿಗಳ ಪಟ್ಟಿಯನ್ನ ಬಿಜೆಪಿ ಹೈ ಕಮಾಂಡ್ ಬಿಡುಗಡೆ ಮಾಡಿದೆ.
ಬಿಜೆಪಿಯ ಒಟ್ಟು 8 ಹಾಲಿ ಸದಸ್ಯರಿಗೆ ಈ ಬಾರಿ ಟಿಕೆಟ್ ತಪ್ಪಿದೆ. ಪ್ರತಾಪ್ ಸಿಂಹ, ಡಿವಿ ಸದಾನಂದ ಗೌಡ, ಕರಡಿ ಸಂಗಣ್ಣ, ಶಿವಕುಮಾರ್ ಉದಾಸಿ, ಜಿಎಸ್ ಬಸವರಾಜು ಅವರಿಗೆ ಟಿಕೆಟ್ ತಪ್ಪಿದೆ. ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಿಜೆಪಿ ಟಿಕೆಟ್ ಇನ್ನೂ ಘೋಷಣೆಯಾಗಿಲ್ಲ. ಯಾರು ನಾಯಕರಾಗುತ್ತಾರೆ ಎಂಬ ಬಗ್ಗೆ ತೀರ್ಮಾನ ಮಾಡಲಿದ್ದಾರೆ.
ಬಿಜಾಪುರ- ರಮೇಶ್ ಜಿಗಜಿಣಗಿ
ಚಿಕ್ಕೋಡಿ- ಅಣ್ಣಾ ಸಾಹೇಬ್ ಜೊಲ್ಲೆ
ಬಾಗಲಕೋಟೆ- ಪಿ.ಸಿ. ಗದ್ದಿಗೌಡರ
ಕಲಬುರಗಿ- ಉಮೇಶ್ ಜಾಧವ್
ಬೀದರ್- ಭಗವಂತ ಖೂಬಾ
ಕೊಪ್ಪಳ- ಡಾ. ಬಸವರಾಜ ಕ್ಯಾವತೋರ್
ಬಳ್ಳಾರಿ- ಶ್ರೀರಾಮುಲು
ಹಾವೇರಿ- ಬಸವರಾಜ ಬೊಮ್ಮಾಯಿ
ಧಾರವಾಡ- ಪ್ರಹ್ಲಾದ್ ಜೋಶಿ
ದಾವಣಗೆರೆ- ಗಾಯತ್ರಿ ಸಿದ್ದೇಶ್ವರ
ಶಿವಮೊಗ್ಗ- ಬಿ.ವೈ. ರಾಘವೇಂದ್ರ
ಉಡುಪಿ-ಚಿಕ್ಕಮಗಳೂರು- ಕೋಟಾ ಶ್ರೀನಿವಾಸ ಪೂಜಾರಿ
ದಕ್ಷಿಣ ಕನ್ನಡ – ಕ್ಯಾ.ಬ್ರಿಜೇಶ್ ಚೌಟಾ
ತುಮಕೂರು – ವಿ. ಸೋಮಣ್ಣ
ಮೈಸೂರು- ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
ಚಾಮರಾಜನಗರ- ಎಸ್. ಬಸವರಾಜು
ಬೆಂಗಳೂರು ಗ್ರಾಮಾಂತರ- ಡಾ.ಸಿ.ಎನ್. ಮಂಜುನಾಥ್
ಬೆಂಗಳೂರು ಉತ್ತರ- ಶೋಭಾ ಕರಂದ್ಲಾಜೆ
ಬೆಂಗಳೂರು ಕೇಂದ್ರ – ಪಿ.ಸಿ. ಮೋಹನ್
ಬೆಂಗಳೂರು ದಕ್ಷಿಣ- ತೇಜಸ್ವಿ ಸೂರ್ಯ