ಬೆಂಗಳೂರು, (www.thenewzmirror.com) :
ಜಯದೇವ ಹೃದ್ರೋಗ ಸಂಸ್ಥೆಯ ಮಾಜಿ ನಿರ್ದೇಶಕ ಡಾ. ಮಂಜುನಾಥ್ ಲೋಕಸಭೆ ಚುನಾವಣೆಗೆ ಸ್ಪರ್ಧಿಸೋದು ಪಕ್ಕ ಆದಂತಿದೆ. ಇಷ್ಟು ದಿನ ರಾಜಕೀಯದಿಂದ ದೂರ ಅಂತ ಹೇಳುತ್ತಿದ್ದ ಡಾ. ಮಂಜುನಾಥ್ ಇದೀಗ ಚುನಾವಣೆ ಸ್ಪರ್ಧೆ ಮಾಡುವ ಮೂಲಕ ರಾಜಕೀಯದಲ್ಲಿ ಅಗ್ನಿ ಪರೀಕ್ಷೆಗೆ ಮುಂದಾಗಲಿದ್ದಾರೆ.
ಬಿಜೆಪಿ ಸೇರುವ ಮೂಲಕ ತಮ್ಮ ರಾಜಕೀಯ ಪ್ರವೇಶಕ್ಕೆ ಸಿದ್ದತೆ ಮಾಡಿಕೊಳ್ಳುತ್ತಿದ್ದು, ಯಾವ ಕ್ಷೇತ್ರ ಇನ್ನಷ್ಟೇ ಗೊತ್ತಾಗಲಿದೆ. ಈ ಬಗ್ಗೆ ಮಾಹಿತಿ ಹಂಚಿಡಿರುವ ವಿಪಕ್ಷ ನಾಯಕ ಆರ್. ಅಶೋಕ್, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಕುರಿತು ಚರ್ಚೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಡಾ. ಮಂಜುನಾಥ್ ಸಮಾಜ ಸೇವೆಯ ಕೆಲಸ ಮಾಡಿದ್ದಾರೆ. ಜಯದೇವ ಸಂಸ್ಥೆಯಲ್ಲಿ ಅವರ ಸೇವೆ ಅನನ್ಯವಾಗಿದೆ. ಅವರು ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಚರ್ಚೆಯಾಗಿದೆ. ಮಂಜುನಾಥ್ ಅವರೊಂದಿಗೂ ಸಮಾಲೋಚನೆ ನಡೆಸಲಾಗಿದೆ. ಅವರು ಸ್ಪರ್ಧಿಸಲು ಒಪ್ಪಿದ್ದಾರೆ. ನಾಳೆ ಅವರು ಪಕ್ಷ ಸೇರುವ ಸಾಧ್ಯತೆ ಇದೆ. ಸೇರ್ಪಡೆ ಕುರಿತು ಪಕ್ಷದ ಕಚೇರಿಯಿಂದ ಅಧಿಕೃತ ಮಾಹಿತಿ ಹೊರಬೀಳಲಿದೆ ಎಂದು ತಿಳಿಸಿದರು.