ಬೆಂಗಳೂರು, (www.thenewzmirror.com) :
ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಎಬಿಪಿ ನ್ಯೂಸ್-ಸಿ ವೋಟರ್ ನಡೆಸಿದ ಸಮೀಕ್ಷೆ ಪ್ರಕಾರ ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಗೆ ಉತ್ತಮ ಫಲಿತಾಂಶದ ನಿರೀಕ್ಷೆ ಇದೆ.
ಕರ್ನಾಟಕದಲ್ಲಿ ಒಟ್ಟು 28 ಲೋಕಸಭಾ ಕ್ಷೇತ್ರಗಳ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಗೆ 23 ಹಾಗೂ ಕಾಂಗ್ರೆಸ್ ಗೆ 5 ಸ್ಥಾನಗಳು ಲಭಿಸಲಿವೆ ಎಂದು ಸಮೀಕ್ಷೆ ಹೇಳುತ್ತಿದೆ. ಇನ್ನು ಮತಗಳಿಕೆ ವಿಚಾರದಲ್ಲಿ ಕಾಂಗ್ರೆಸ್ ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ಶೇಕಡವಾರು ಮತಗಳನ್ನ ಗಳಿಸಲಿದ್ದು ಕಾಂಗ್ರೆಸ್ ಶೇಕಡಾ 42 ರಷ್ಟು ಬಿಜೆಪಿ, ಜೆಡಿಎಸ್ ಮೈತ್ರಿ ಶೇಕಡ 53 ರಷ್ಟು ಮತ ಪಡೆಯಬಹುದು ಎಂದು ಎಬಿಪಿ ನ್ಯೂಸ್-ಸಿ ವೋಟರ್ ಸಮೀಕ್ಷೆ ತಿಳಿಸಿದೆಮ
2019ರ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಯಿಂದಾಗಿ ಕೇವಲ 2 ಸ್ಥಾನಗಳನ್ನ ಪಡೆದಿತ್ತು. ಬಿಜೆಪಿ 25 ಸ್ಥಾನಗಳನ್ನ ಗೆದ್ದಿತ್ತು. ಕರ್ನಾಟಕ ಅಷ್ಟೇ ಅಲ್ಲದೆ ರಾಜಸ್ಥಾನ, ಗುಜರಾತ್, ಅಸ್ಸಾಂ ಮತ್ತು ಹರಿಯಾಣದಲ್ಲಿ ಬಿಜೆಪಿ ಭಾರಿ ಗೆಲುವು ಸಾಧಿಸಬಹುದು ಎಂದು ಊಹಿಸಲಾಗಿದೆ. ಹಾಗೆಯೇ ಕೇರಳದಲ್ಲಿ ಕಾಂಗ್ರೆಸ್ ತನ್ನ ಪ್ರಾಬಲ್ಯವನ್ನು ಮುಂದುವರಿಸಲಿದ್ದರೆ, ಈಶಾನ್ಯ ಭಾರತದಲ್ಲಿ ಬಿಜೆಪಿ ಹೆಚ್ಚಿನ ಸೀಟು ಗೆಲ್ಲಲಿದೆ ಎಂದು ಸಮೀಕ್ಷೆ ತಿಳಿಸಿದೆ.