ಬೆಂಗಳೂರು, (www.thenewzmirror.com) :
ಇನ್ನೇನು ಕೆಲವೇ ದಿನಗಳಲ್ಲಿ ಲೋಕಸಭೆ ಚುನಾವಣೆಯ ಅಧಿಸೂಚನೆ ಹೊರಬೀಳಲಿದೆ. ಅದಕ್ಕೂ ಮುಂಚೆಯಿಂದಲೇ ಚುನಾವಣಾ ಆಯೋಗ ಚುನಾವಣಾ ಕರ್ತವ್ಯಕ್ಕೆ ಅಧಿಕಾರಿಗಳನ್ನ ನೇಮಕ ಪ್ರಕ್ರಿಯೆಗೆ ಚಾಲನೆ ಕೊಟ್ಟಿದೆ. ಸುಗಮ ಚುನಾವಣೆ ನಡೆಯುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಗೂ ಜಿಲ್ಲಾ ನೋಡಲ್ ಅಧಿಕಾರಿಗಳನ್ನ ನೇಮಿಸಿ ಆದೇಶ ಹೊರಡಿಸಲಾಗಿದೆ.
ರಾಜ್ಯದ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳನ್ನ ರಾಝ್ಯ ಎಲ್ಲ ಜಿಲ್ಲೆಗಳಿಗೂ ಜಿಲ್ಲಾಆದಾಯ ತೆರಿಗೆ ನೋಡಲ್ ಅಧಿಕಾರಿಗಳನ್ನ ನಿಯೋಜಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. 31 ಜಿಲ್ಲೆಗಳಿಗೂ ಒಬ್ಬೊಬ್ಬ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳನ್ನ ನೇಮಿಸಲಾಗಿದೆ ಎಂದು ಆಯೋಗ ಮಾಹಿತಿ ನೀಡಿದೆ.