ಬೆಂಗಳೂರು, (www.thenewzmirror.com):
ಬಿಜೆಪಿ ಮುಬರುವ ಲೋಕಸಭಾ ಚುನಾವಣೆಗೆ ತನ್ನ ಎರಡನೇ ಪಟ್ಟಿಯನ್ನ ಬಿಡುಗಡೆ ಮಾಡಿದೆ. ಆ ಪಟ್ಟಿಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಡಿ.ವಿ. ಸದಾನಂದ ಗೌಡ ಅವರಿಗೆ ಟಿಕೆಟ್ ನೀಡಲಾಗಿಲ್ಲ. ಅವರ ಬದಲಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಮಣಿ ಹಾಕಿದೆ.
ಬಿಜೆಪಿ ಪಟ್ಟಿ ಬಿಡುಗಡೆಯಾಗುವ ಮುನ್ನವೇ ಕೇಂದ್ರದಿಂದ ಡಿವಿಎಸ್ ಗೆ ಸಂದೇಶ ಬಂದಿತ್ತು ಎನ್ನಲಾಗಿತ್ತು. ದೂರವಾಣಿ ಮೂಲಕ ಮಾಹಿತಿ ರವಾನೆಯಾದ ಬಳಿಕ ಸದಾನಂದಗೌಡರು ಟ್ವಿಟ್ಟರ್ ಮೂಲಕ ಡಿ.ವಿ ಸದಾನಂದಗೌಡರು ವಿದಾಯದ ಸಂದೇಶ ಬರೆದಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಡಿ.ವಿ ಸದಾನಂದಗೌಡರು, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ನನ್ನೆಲ್ಲಾ ಪ್ರೀತಿಯ ಬಂಧುಗಳೇ,
ನನಗೆ ಕಳೆದ 10 ವರ್ಷಗಳ ಕಾಲ ಈ ಕ್ಷೇತ್ರದ ಲೋಕಸಭಾ ಸದಸ್ಯನಾಗಿ ನಿಮ್ಮ ಕೆಲಸ ಮಾಡುವ ಅವಕಾಶವನ್ನು ಮಾಡಿಕೊಟ್ಟು ಆಶೀರ್ವಾದವನ್ನು ಮಾಡಿದ್ದೀರಿ. ನಾನು ನನ್ನ ಶಕ್ತಿ ಮೀರಿ ನಿಮ್ಮೆ ಸೇವೆಯನ್ನು ಮಾಡುವ ಪ್ರಯತ್ನವನ್ನು ಮಾಡಿದ್ದೇನೆ. ನಿನ್ನ ಆಶೀರ್ವಾದದಿಂದ ಕೇಂದ್ರದಲ್ಲಿ ನಮ್ಮೆಲ್ಲರ ಪ್ರೀತಿಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜೊತೆಯಲ್ಲಿ 7 ವರ್ಷಗಳ ಕಾಲ ಕ್ಯಾಬಿನೆಟ್ ಮಂತ್ರಿಯಾಗಿ ಕೆಲಸ ಮಾಡುವ ಅವಕಾಶವನ್ನು ಕೂಡ ಕಲ್ಪಿಸಿದ್ದೀರಿ. ನಾನು ನಿಮ್ಮೆಲ್ಲರಿಗೂ ಚಿರಋಣಿ. ನಿಮ್ಮ ಜೊತೆಗೆ ಇನ್ನು ಮುಂದೆಯೂ ಇರುತ್ತೇನೆ. ಎಲ್ಲರಿಗೂ ನನ್ನ ಅಂತರಾಳದ ಹೃದಯ ತುಂಬಿದ ಧನ್ಯವಾದಗಳು ಎಂದು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ.