ನವದೆಹಲಿ, (www.thenewzmirror.com) :
ಭಾರತದಲ್ಲಿ 18ನೇ ಲೋಕಸಭಾ ಚುನಾವಣೆಗೆ ಮುಖ್ಯ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ. ದೇಶದಲ್ಲಿ 7 ಹಂತದಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 19ರಿಂದ ಲೋಕಸಭೆ ಚುನಾವಣೆ ಆರಂಭವಾಗಲಿದೆ. ಜೂನ್ 4ಕ್ಕೆ ಫಲಿತಾಂಶ ಪ್ರಕಟವಾಗಲಿದೆ ಎಂದುದೆಹಲಿ ವಿಜ್ಞಾನ ಭವನದಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾಹಿತಿ ನೀಡಿದರು.
ದೇಶದ 543 ಕ್ಷೇತ್ರಗಳಲ್ಲಿ ಈ ಚುನಾವಣೆ ನಡೆಯಲಿದ್ದು, 17ನೇ ಲೋಕಸಭೆಯ ಅಧಿವೇಶನ ಜೂನ್ 16, 2024 ರಂದು ಕೊನೆಗೊಳ್ಳಲಿದೆ. ಅಷ್ಟರೊಳಗೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ರಾಜೀವ್ ಕುಮಾರ್ ಮಾಹಿತಿ ನೀಡಿದ್ರು.
ದೇಶಾದ್ಯಂತ 10.5 ಲಕ್ಷ ಮತಗಟ್ಟೆಗಳಿದ್ದು, 55 ಲಕ್ಷ ಇವಿಎಂಗಳನ್ನ ಸಿದ್ದಪಡೆಸಲಾಗಿದೆ. ಕರ್ನಾಟಕ ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲನೇ ಹಂತದ ಮತದಾನ ನಡೆಯಲಿದ್ದು ಹಾಗೂ ಮೇ 7ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಕರ್ನಾಟಕದಲ್ಲಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಹಾಗೂ ಎರಡನೇ ಹಂತದಲ್ಲಿ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಹಾಗಾದರೆ ಮೊದಲ ಹಂತದಲ್ಲಿ ಯಾವ ಕ್ಷೇತ್ರಗಳಿಗೆ ಹಾಗೂ ಎರಡನೇ ಹಂತದಲ್ಲಿ ಯಾವ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಏಪ್ರಿಲ್ 26ಕ್ಕೆ ಎಲ್ಲೆಲ್ಲಿ ಮತದಾನ?
1) ಚಿತ್ರದುರ್ಗ
2) ಉಡುಪಿ-ಚಿಕ್ಕಮಗಳೂರು
3) ದಕ್ಷಿಣ ಕನ್ನಡ
4) ಹಾಸನ
5) ತುಮಕೂರು
6) ಚಿಕ್ಕಬಳ್ಳಾಪುರ
7) ಕೋಲಾರ
8) ಮಂಡ್ಯ
9) ಮೈಸೂರು-ಕೊಡಗು
10) ಚಾಮರಾಜನಗರ
11) ಬೆಂಗಳೂರು ಗ್ರಾಮಾಂತರ
12) ಬೆಂಗಳೂರು ದಕ್ಷಿಣ
13) ಬೆಂಗಳೂರು ಉತ್ತರ
14) ಬೆಂಗಳೂರು ಕೇಂದ್ರ
ಮೇ 7ರಂದು ಎಲ್ಲೆಲ್ಲಿ ಮತದಾನ?
1) ಬೆಳಗಾವಿ
2) ಬಳ್ಳಾರಿ
3) ಚಿಕ್ಕೋಡಿ
4) ಹಾವೇರಿ-ಗದಗ
5) ಕಲಬುರಗಿ
6) ಬೀದರ್
7) ಹುಬ್ಬಳಿ – ಧಾರವಾಡ
8) ಕೊಪ್ಪಳ
9) ರಾಯಚೂರು
10) ಉತ್ತರ ಕನ್ನಡ
11) ದಾವಣಗೆರೆ
12) ಶಿವಮೊಗ್ಗ
13) ಬಾಗಲಕೋಟೆ
14) ವಿಜಯಪುರ
ಯಾವ ಹಂತದಲ್ಲಿ ಯಾವ ಯಾವ ರಾಜ್ಯದಲ್ಲಿ ಎಲೆಕ್ಷನ್.?
ಮೊದಲ ಹಂತದಲ್ಲಿ ಅರುಣಾಚಲ ಪ್ರದೇಶ, ಅಂಡಮಾನ್ ನಿಕೋಬಾರ್, ಆಂಧ್ರಪ್ರದೇಶ, ಚಂಡೀಗಢ್, ದಾದ್ರ ಹವೇಲಿ, ದೆಹಲಿ, ಗೋವಾ, ಗುಜರಾತ್, ಹಿಮಾಚಲ ಪ್ರದೇಶ, ಹರ್ಯಾಣ, ಕೇರಳ, ಲಕ್ಷದ್ವೀಪ, ಲಡಾಖ್, ಮಿಜೋರಾಂ, ಮೇಘಾಲಯ, ನಾಗಾಲ್ಯಾಂಡ್, ಪಾಂಡಿಚೇರಿ, ಸಿಕ್ಕಿಂ, ತಮಿಳುನಾಡು, ಪಂಜಾಬ್, ತೆಲಂಗಾಣ, ಉತ್ತರಾಖಂಡ್ ನಲ್ಲಿ ಮತದಾನ ನಡೆಯಲಿದೆ.
ಕರ್ನಾಟಕ, ರಾಜಸ್ಥಾನ, ತ್ರಿಪುರಾ, ಮಣಿಪುರದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಚತ್ತೀಸ್ ಗಢ್, ಅಸ್ಸಾಂನಲ್ಲಿ ಮೂರು ಹಂತದಲ್ಲಿ ಮತದಾನ ನಡೆಯಲಿದೆ. ಒಡಿಶಾ, ಮಧ್ಯಪ್ರದೇಶ ಮತ್ತು ಜಾರ್ಖಂಡ್ ನಲ್ಲಿ ನಾಲ್ಕು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮಹಾರಾಷ್ಟ್ರ, ಜಮ್ಮು ಮತ್ತು ಕಾಶ್ಮೀರದಲ್ಲಿ ಐದು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಉತ್ತರಪ್ರದೇಶ, ಬಿಹಾರ ಮತ್ತು ಪಶ್ಚಿಮಬಂಗಾಳದಲ್ಲಿ ಏಳೂ ಹಂತಗಳಲ್ಲಿ ಮತದಾನ ನಡೆಯಲಿದೆ.
ದೇಶದಲ್ಲಿ 97 ಕೋಟಿ ಮತದಾರರು.!
2024ರ ಚುನಾವಣೆಗೆ ದೇಶದಲ್ಲಿ 96.8 ಕೋಟಿ ಮತದಾರರಿದ್ದು, ಅದರಲ್ಲಿ ಪುರುಷ ಮತದಾರರ ಸಂಖ್ಯೆ 49.7 ಕೋಟಿ ಮತ್ತು ಮಹಿಳಾ ಮತದಾರರ ಸಂಖ್ಯೆ 47.1 ಕೋಟಿಗಿಂತ ಹೆಚ್ಚಾಗಿದೆ. ಇನ್ನು ಈ ಬಾರಿಯ ಚುನಾವಣೆಯಲ್ಲಿ 1.82 ಕೋಟಿ ಮತದಾರರು ಮೊದಲ ಬಾರಿಗೆ ಮತ ಚಲಾಯಿಸಲಿದ್ದಾರೆ.
2019ರ 17ನೇ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ NDA 543 ಸ್ಥಾನಗಳಲ್ಲಿ 353 ಸ್ಥಾನಗಳನ್ನು ಗಳಿಸಿತು. ಬಿಜೆಪಿ ಏಕಾಂಗಿಯಾಗಿ 303 ಸ್ಥಾನಗಳನ್ನ ಪಡೆದುಕೊಂಡಿದ್ದು, ಅಗತ್ಯ ಬಹುಮತದ 272 ಸ್ಥಾನಗಳನ್ನ ಮೀರಿದೆ.