Tajmahal News | ಭಾರೀ ಮಳೆಗೆ ಸೋರುತಿದೆಯಂತೆ ತಾಜ್ ಮಹಲ್ ಮುಖ್ಯ ಗುಂಬಜ್..!

Main Dome of Taj Mahal Leaks Due to Heavy Rain

ಬೆಂಗಳೂರು, (www.thenewzmirror.com) ;

ಜಗತ್ತಿನ ಅದ್ಭುತಗಳಲ್ಲಿ ಒಂದಾದ ತಾಜ್ ಮಹಲ್ ಇದೀಗ ಸುದ್ದಿಯಲ್ಲಿದೆ. ಆಗ್ರಾ ಬಳಿ ಬೀಳುತ್ತಿರುವ ಭಾರೀ ಮಳೆ ಹಿನ್ನೆಲೆಯಲ್ಲಿ ತಾಜ್‌ಮಹಲ್‌ನ ಮುಖ್ಯ ಗುಂಬಜ್‌ನಲ್ಲಿ ಮಳೆ ನೀರು ಸೋರಿಕೆಯಾಗುತ್ತಿದೆ. ಈ ಕುರಿತ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

RELATED POSTS

ಉತ್ತರ ಪ್ರದೇಶದ ಆಗ್ರಾದ ತಾಜ್‌ಮಹಲ್‌ನ ಮುಖ್ಯ ಗುಮ್ಮಟವು ಕಳೆದ ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ನೀರಿನ ಸೋರಿಕೆಯಾಗುತ್ತಿದೆ. ಹೀಗಾಗಿ ಆವರಣದಲ್ಲಿರುವ ಉದ್ಯಾನವನ್ನು ಮುಳುಗಿಸಿದೆ. 

ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಅಧಿಕಾರಿಯೊಬ್ಬರು, ತಾಜ್ ಮಹಲ್‌ನ ಮುಖ್ಯ ಗುಮ್ಮಟದಲ್ಲಿ ಸೋರಿಕೆಯಾಗಿದೆ. ಆದರೆ ಯಾವುದೇ ಹಾನಿ ಇಲ್ಲ ಎಂದು ತಿಳಿಸಿದ್ದಾರೆ.

ನಾವು ತಾಜ್ ಮಹಲ್‌ನ ಮುಖ್ಯ ಗುಮ್ಮಟದಲ್ಲಿ ಸೋರಿಕೆಯನ್ನು ಗಮನಿಸಿದ್ದೇವೆ. ಪರಿಶೀಲನೆ ನಡೆಸಿದಾಗ ಸೋರಿಕೆಯಿಂದ ಉಂಟಾಗಿರುವುದು ಕಂಡುಬಂದಿದ್ದು, ಯಾವುದೇ ಹಾನಿ ಸಂಭವಿಸಿಲ್ಲ. ನಾವು ಡ್ರೋನ್ ಕ್ಯಾಮೆರಾವನ್ನು ಬಳಸಿಕೊಂಡು ಗುಮ್ಮಟದ ಸ್ಥಿತಿಯನ್ನು ಪರಿಶೀಲಿಸಿದ್ದೇವೆ ಎಂದು ಎಎಸ್‌ಐನ ರಾಜ್‌ಕುಮಾರ್‌ ಪಾಟೀಲ್‌ ತಿಳಿಸಿದ್ದಾರೆ.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist