ಬೆಂಗಳೂರು, (www.thenewzmirror.com) ;
ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ಕೊಟ್ಟಿದೆ. ಸಮುದ್ರ ಮಟ್ಟದಲ್ಲಿ ಆಫ್ ದೌರ್ ಟ್ರಫ್ ದಕ್ಷಿಣ ಗುಜರಾತ್‌ನ ಮೂಲಕ ಮಧ್ಯ ಕೇರಳದ ಕರಾವಳಿಯವರೆಗೆ ಹಾದು ಹೋಗುತ್ತದೆ. ಹೀಗಾಗಿ ಮಳೆಯಾಗುವ ಸಾಧ್ಯತೆಯಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಹಾಗಿದ್ರೆ ಮುಂದಿನ ಏಳು ದಿನಗಳ ಕಾಲ ಯಾವ್ಯಾವ ಜಿಲ್ಲೆಯಲ್ಲಿ ವರುಣ ಅಬ್ಬರಿಸಲಿದ್ದಾನೆ ಅನ್ನೋದನ್ನ ನೋಡುವುದಾದರೆ..,
ಇಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಉಳಿದ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೊಪ್ಪಳ, ರಾಯಚೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಬಳ್ಳಾರಿ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಆಗಸ್ಟ್ 6 ರಂದು ಕರಾವಳಿ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಉಳಿದ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳ ಮೇಲೆ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಆಗಸ್ಟ್ 7 ರಂದು ಕರಾವಳಿ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಆಗಸ್ಟ್ 8 ರಂದು ಕರಾವಳಿ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಆಗಸ್ಟ್ 9 ರಂದು ಕರಾವಳಿ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಆಗಸ್ಟ್ 10 ರಂದು ಕರಾವಳಿ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಆಗಸ್ಟ್ 11 ರಂದು ಕರಾವಳಿ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಮಳೆಯ ಪ್ರಮಾಣ
ಬೆಂಗಳೂರು ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಸಾಮಾನ್ಯ ಮೋಡ ಕವಿದ ವಾತಾವರಣವಿರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹಾಗೆನೇ ನಗರದಲ್ಲಿ ಗರಿಷ್ಠ 28 ° C ಮತ್ತು ಕನಿಷ್ಠ 21 ° C ತಾಪಮಾನ ಇರಲಿದೆ. ಹಾಗೆನೇ ಮುಂದಿನ 48 ಗಂಟೆಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಹಗುರ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಗರಿಷ್ಠ 28 ° C ಮತ್ತು ಕನಿಷ್ಠ 21 ° C ತಾಪಮಾನ ಇರಲಿದೆ ಎಂದು ಹವಾಮಾನ ತಜ್ಞ ಡಾ.ಎನ್.ಪುವಿಯರಸನ್ ಮಾಹಿತಿ ನೀಡಿದ್ದಾರೆ.