ಬೆಂಗಳೂರು, (www.thenewzmirror.com) ;
ನಮ್ಮ ಮೆಟ್ರೋ ಬಿಎಂಟಿಸಿ ನಂತರ ಅತಿ ಹೆಚ್ಚು ಪ್ರಯಾಣ ಮಾಡುವ ಸಂಪರ್ಕ ಸಾಧನ. ಬೆಂಗಳೂರು ಮಂದಿಯ ಎರಡನೇ ಪ್ರಯಾಣದ ಜೀವನಾಡಿ ಎಂದರೆ ತಪ್ಪಾಗಲಾರದು. ಹಸಿರು ಮಾರ್ಗದ ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ನಡುವೆ ಮೆಟ್ರೋ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ನಮ್ಮ ಮೆಟ್ರೋ ವಿಸ್ತರಿಸಿದ ಹಸಿರು ಮಾರ್ಗದ ನಾಗಸಂದ್ರದಿಂದ ಮಾದಾವರ ನಡುವೆ ಸಿಗ್ನಲಿಂಗ್ ಸಂಬಂಧಿತ ಕೆಲಸಗಳು ಮುಂದುವರೆಸೋ ನಿಟ್ಟಿನಲ್ಲಿ ಆಗಸ್ಟ್ 20,23,30 ಮತ್ತು ಸೆಪ್ಟೆಂಬರ್ 6 ಮತ್ತು 11ರಂದು ಪೂರ್ಣ ದಿನ ಮೆಟ್ರೋ ಸೇವೆಗಳನ್ನು ರದ್ದುಪಡಿಸಲಾಗಿದೆ ಎಂದು ನಮ್ಮ ಮೆಟ್ರೋ ಮಾಹಿತಿ ನೀಡಿದೆ.
ಸಿಗ್ನಲಿಂಗ್ ಸಂಬಂಧಿತ ಬಾಕಿ ಇರೋದ್ರಿಂದ ರೈಲು ಸೇವೆಯ ಸಮಯ, ಕಾರ್ಯಾಚರಣೆಯಲ್ಲೂ ಬದಲಾವಣೆ ಮಾಡಲಾಗಿದೆ. ಪೀಣ್ಯ ಇಂಡಸ್ಟ್ರಿ ಮತ್ತು ನಾಗಸಂದ್ರ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು. ಅಂತ ಪ್ರಕಟಣೆಯಲ್ಲಿ ತಿಳಿಸಿದೆ.
ಆಗಸ್ಟ್ 25ರಂದು ಮೊದಲ ರೈಲು ಸೇವೆಯು ಬೆಳಗ್ಗೆ 5 ಗಂಟೆಯ ಬದಲಾಗಿ 6 ಗಂಟೆಗೆ ಅರಂಭವಾಗಲಿದೆ. ಪೀಣ್ಯ ಇಂಡಸ್ಟ್ರಿಯಿಂದ ರೇಷ್ಣೆ ಸಂಸ್ಥೆ ಮೆಟ್ರೋ ನಿಲ್ದಾಣದ ಕಡೆಗೆ ಸಾಗುವ ಮೆಟ್ರೋ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ
ಆಗಸ್ಟ್ 24ರಂದು ಕೊನೆಯ ರೈಲು ಸೇವೆ ರಾತ್ರಿ 11:12ಕ್ಕೆ ಪ್ರಾರಂಭವಾಗಲಿದೆ. ಆಗಸ್ಟ್ 25ರಂದು ಮೊದಲ ರೈಲು ಸೇವೆಯು ಬೆಳಗ್ಗೆ 5 ಗಂಟೆಗೆ ಆರಂಭವಾಗಲಿದೆ.
ನೇರಳೆ ಮಾರ್ಗದ ಮೆಟ್ರೋ ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ BMRCL ಸ್ಪಷ್ಟಪಡಿಸಿದೆ.