ಬೆಂಗಳೂರು, (www.thenewzmirror.com) ;
ಇಂದು ಮಂಡ್ಯದ ಗಂಡು, ರೆಬಲ್ ಸ್ಟಾರ್, ಕಲಿಯುಗದ ಕರ್ಣ ಅಂತಾನೆ ಕರೆಸಿಕೊಳ್ತಿದ್ದ ದಿವಂಗತ ಅಂಬರೀಷ್ ಅವರ ಹುಟ್ಟು ಹಬ್ಬ. ಹೀಗಾಗಿ ಅನೇಕ ನಟ, ದಿಗ್ಗಜರು ಮಂಡ್ಯದ ಗಂಡಿಗೆ ಶುಭ ಕಾಮನೆಗಳನ್ನ ತಳಿಸಿದ್ದಾರೆ.
ಇದೆಲ್ಲದರ ನಡುವೆ ಸಂಸದೆ ಹಾಗೂ ಅಂಬರೀಷ್ ಪತ್ನಿ ಸುಮಲತಾ ಸಾಮಾಜಿಕ ಜಾಲತಾಣದಲ್ಲಿ ಭಾವುಕ ಫೋಸ್ಟ್ ಒಂದನ್ನ ಹಾಕಿ, ತಮ್ಮ ಶುಭಾಷಯವನ್ನ ತಿಳಿಸಿದ್ದಾರೆ.
https://twitter.com/sumalathaA/status/1662906892224729093?t=S7M736KEBYfY7A1Zbf07zg&s=19
”ನಿಮ್ಮ ಬಾಲ್ಯದ ದಿನಗಳನ್ನು ಆಗಾಗ್ಗೆ ಹೇಳುತ್ತಿದ್ದಿರಿ. ಬಾಲ್ಯದ ಆ ತುಂಟತನ ಅದು ನಿಮ್ಮಲ್ಲಿ ಕೊನೆವರೆಗೂ ಇತ್ತು. ಹಾಗಾಗಿ ನಿಮ್ಮ ಹುಟ್ಟು ಹಬ್ಬ ಅದೊಂದು ಸಡಗರವಾಗಿರುತ್ತಿತ್ತು. ಅದು ನಮಗಷ್ಟೇ ಅಲ್ಲ, ಅಭಿಮಾನಿಗಳ ಪಾಲಿಗೆ ನಿಜವಾದ ಹಬ್ಬ ಭೌತಿಕವಾಗಿ ನಮ್ಮೊಂದಿಗೆ ನೀವು ಇದ್ದಿದ್ದರೆ, ಇಂದು 71ನೇ ವರ್ಷದ ಹುಟ್ಟು ಹಬ್ಬವನ್ನೂ ಅಭಿಮಾನಿಗಳ ಜೊತೆಯಾಗಿ ಮತ್ತಷ್ಟು ಅದ್ಧೂರಿಯಾಗಿ ಆಚರಿಸುತ್ತಿದ್ದೆವು. ಮನೆ ಮುಂದೆ ಜನಸಾಗರ, ನಿಮ್ಮ ಆರ್ಭಟ, ಹಾಸ್ಯ ಪ್ರಜ್ಞೆಯ ಮಾತು, ರಾತ್ರಿ ಇಡೀ ಕಾಯುತ್ತಾ ನಿಂತಿದ್ದ ಅಭಿಮಾನಿಗಳ ಘೋಷಣೆ ಇನ್ನೂ ಹಾಗೆಯೇ ಇದೆ. ಇವತ್ತೂ ಕೂಡ ಅವೆಲ್ಲವೂ ನಿಮಗೆ ಶುಭಾಶಯ ಹೇಳುತ್ತಿವೆ. ಸ್ವೀಕರಿಸಿ. ಹ್ಯಾಪಿ ಬರ್ತಡೇ ಮೈ ಅಂಬಿ. ಜತೆಗಿರದ ಜೀವ ಎಂದೆಂದಿಗೂ ಜೀವಂತ” ಎಂದು ಸುಮಲತಾ ಬರೆದುಕೊಂಡಿದ್ದಾರೆ.