ಬೆಂಗಳೂರು, (www.thenewzmirror.com) ;
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತಕ್ಕೆ ಆದೇಶ ನೀಡಿದ ಬೆನ್ನಲ್ಲೇ ಇದೀಗ ಎಫ್ ಐಆರ್ ದಾಖಲಾಗಿದ್ದು, ಸಿದ್ದರಾಮಯ್ಯ ಎ1, ಪತ್ನಿ ಎ 2 ವಿರುದ್ಧ ದೂರು ದಾಖಲಾಗಿದೆ.
ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶದಂತೆ ಲೋಕಾಯುಕ್ತ ಎಡಿಜಿಪಿ ಮನೀಶ್ ಖರ್ಬೀಕರ್ ಸೂಚನೆ ಮೇರೆಗೆ ಮೈಸೂರು ಲೋಕಾಯುಕ್ತ ಎಸ್ ಪಿ ಉದೇಶ್ ನೇತೃತ್ವದಲ್ಲಿಸಿಎಂ ತವರು ಜಿಲ್ಲೆ ಮೈಸೂರು ಲೋಕಾಯುಕ್ತದಲ್ಲಿ FIR ದಾಖಲಾಗಿದೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ಈ ಸಂಬಂಧ ಜನಪ್ರತಿನಿಧಿಗಳ ಕೋರ್ಟ್ ಕೂಡ ಸಿಎಂ ಸಿದ್ಧರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಆದೇಶಿಸಿತ್ತು.
ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ A 1 ಆರೋಪಿಯಾಗಿದ್ದರೆ, ಅವರ ಪತ್ನಿ ಪಾರ್ವತಿ A 2 ಆರೋಪಿಯಾಗಿದ್ದಾರೆ. ಅವರ ಬಾಮೈದಾ ಮಲ್ಲಿಕಾರ್ಜುನ A 3, ಭೂಮಾಲಿಕ ದೇವರಾಜು ಎ4 ಹಾಗೂ ಎ5 ಇತರರು ಎಂದು ಎಫ್ಐಆರ್ನಲ್ಲಿ ದಾಖಲಿಸಲಾಗಿದೆ.