Muda Scam | ಮೂಡ ಹಗರಣಕ್ಕೆ ಸಂಬಂಧಪಟ್ಟಂತೆ ವೀಡಿಯೋ ಬಿಡುಗಡೆ ಮಾಡಿದ ಸಿಎಂ..! ವೀಡಿಯೋ ನೋಡಿ ಶಾಕ್ ಆದ ಮೈತ್ರಿ ನಾಯಕರು..!

ಬೆಂಗಳೂರು, (www.thenewzmirror.com) ;

ಮೂಡ ಹಗರಣ ದಿನಕ್ಕೊಂದು ಸ್ವರೂಪ ಪಡೆದುಕೊಳ್ತಿದೆ. ಒಂದ್ಕಡೆ ಮೈತ್ರಿ ನಾಯಕರು ಸಿಎಂ ಸಿದ್ದರಾಮಯ್ಯ ಅವ್ರ ರಾಜೀನಾಮೆಗೆ ಪಟ್ಟು ಹಿಡಿದಿದ್ರೆ ಮತ್ತೊಂದ್ಕಡೆ ಆಡಳಿತ ಪಕ್ಷದ ಸಚಿವರು, ಹೈ ಕಮಾಂಡ್ ಸಿಎಂ ತಪ್ಪು ಮಾಡಿಲ್ಲ ಅಂತ ಸಮರ್ಥಿಸಿಕೊಳ್ತಿದ್ದಾರೆ. ಈ ಎಲ್ಲ ಆರೋಪ ಸಮರ್ಥನೆ ನಡುವೆನೇ ಸಿಎಂ ಮೂಡ ಹಗರಣಕ್ಕೆ ಸಂಬಂಧಪಟ್ಟ ಮಹತ್ವದ ವೀಡಿಯೋ ಒಂದನ್ನ ಬಿಡುಗಡೆ ಮಾಡಿದ್ದು, ಮೈತ್ರಿ ನಾಯಕರಿಗೇ ಶಾಕ್ ಆಗಿದ.

RELATED POSTS

ಮೂಡ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಸಮರ್ಥನೆ ಮಾಡಿಕೊಳ್ಳುವ ವೇಳೆ ವೈಟ್ನರ್ ಹಚ್ಚಿದ ದಾಖಲೆಯೊಂದನ್ನ ತೋರಿಸಿದ್ದರು. ಇದೇ ದಾಖಲೆಯನ್ನ ಮೈತ್ರಿ ನಾಯಕರು ಸಿಎಂ ತಪ್ಪು ಮಾಡಿದ್ದಾರೆ. ತಪ್ಪು ಮಾಡಿಲ್ಲ ಅನ್ನೋದಾದ್ರೆ ವೈಟ್ನರ್ ಹಚ್ಚುವ ಅಗತ್ಯವೇನಿತ್ತು ಅಂತ ಪ್ರಶ್ನೆ ಮಾಡ್ತಿದ್ರು. ಈ ಎಲ್ಲ ಪ್ರಶ್ನೆಗಳಿಗೆ ಸಿಎಂ ಸಾಕ್ಷಿ ಸಮೇತ ಉತ್ತರ ನೀಡಿದ್ದು, ಸಿಎಂ ವಿರುದ್ಧ ಗುಡುಗುತ್ತಿದ್ದವರೆಲ್ಲ ಗಪ್ ಚುಪ್ ಆಗಿದ್ದಾರೆ.

ಸಿಎಂ ಬಿಡುಗಡೆ ಮಾಡಿರುವ ವೀಡಿಯೋದಲ್ಲಿ ಮುಡಾ ಅಕ್ರಮವಾಗಿ ಸ್ವಾದೀನಪಡಿಸಿಕೊಂಡ ನಮ್ಮ ಕುಟುಂಬದ ಜಮೀನಿಗೆ ಬದಲಿ ಭೂಮಿ ನೀಡುವಂತೆ ನನ್ನ ಪತ್ನಿ ಸಲ್ಲಿಸಿದ್ದ ಅರ್ಜಿಯಲ್ಲಿ ನಾಲ್ಕೈದು ಪದಗಳಿಗೆ ವೈಟ್ನರ್‌ ಹೆಚ್ಚಿದನ್ನೇ ಮಹಾನ್‌ ಅಪಾರಾಧವೆಂಬಂತೆ ಗಂಟಲು ಹರಿದುಕೊಂಡ ಬಿಜೆಪಿ – ಜೆಡಿಎಸ್‌ ನಾಯಕರೇ, ವೈಟ್ನರ್‌ ಹಿಂದಿರುವ ಅಕ್ಷರಗಳೇನು ಎಂಬುದು ಈ ವೀಡಿಯೋದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ, ನಿಮ್ಮ ದ್ವೇಷದ ಕನ್ನಡಕ ಕಳಚಿಟ್ಟು ಸರಿಯಾಗಿ ಕಣ್ಣುಬಿಟ್ಟು ನೋಡಿ ಅಂತ ಕಾಲೆದಿದ್ದಾರೆ.

ನನ್ನ ಪತ್ನಿ ಬದಲೀ ಭೂಮಿ ಕೇಳಿದ್ದು ತನ್ನದೇ ಜಮೀನನ್ನು ಮುಡಾ ವಶಕ್ಕೆ ಪಡೆದು ಅಭಿವೃದ್ಧಿಪಡಿಸಲಾದ ದೇವನೂರು 3ನೇ ಹಂತದ ಬಡಾವಣೆಯಲ್ಲಿ ಅಥವಾ ನಂತರ ಪ್ರಾಧಿಕಾರವು ಅಭಿವೃದ್ಧಿ ಪಡಿಸಿದ ಸಮಾನಾಂತರ ಬಡಾವಣೆಯಲ್ಲಿ. ಅಲ್ಲಿ ನಿವೇಶನಗಳು ಲಭ್ಯವಿರದ ಕಾರಣಕ್ಕೆ “ದೇವನೂರು 3ನೇ ಹಂತದ ಬಡಾವಣೆಯಲ್ಲಿ ಅಥವಾ ನಂತರ” ಎಂಬ ನಾಲ್ಕೈದು ಪದಗಳಿಗೆ ವೈಟ್ನರ್‌ ಹಾಕಿ, ಪ್ರಾಧಿಕಾರ ಅಭಿವೃದ್ಧಿ ಪಡಿಸಿದ ಸಮಾನಂತರ ಬಡಾವಣೆಯಲ್ಲಿ ನಿವೇಶನ ನೀಡಬೇಕೆಂಬ ಮನವಿ ಮಾಡಿದ್ದಾರೆ. ಇದರಲ್ಲಿ ಟಿಪ್ಪಣಿಯೂ ಇಲ್ಲ, ಆದೇಶವೂ ಇಲ್ಲ, ಅಪ್ಪಣೆಯೂ ಇಲ್ಲ. ತನಗೆ ಸೇರಿದ ಭೂಮಿಯಲ್ಲೇ ನಿವೇಶನ ಕೊಡಿ ಎಂಬ ಮನವಿ ಅಷ್ಟೆ ಇದೆ.

“ವೈಟ್ನರ್‌ ಹಚ್ಚಿ ಕಪ್ಪು ಚುಕ್ಕೆ ಅಳಿಸಿಕೊಳ್ಳಲು ಸಾಧ್ಯವಿಲ್ಲ, ಸಿಎಂ ಪತ್ನಿ ನಿವೇಶನ ಕೇಳಿದ್ದು ವಿಜಯನಗರದಲ್ಲಿ, ಮುಡಾ ವಿಚಾರ ಚರ್ಚೆಗೆ ಬಂದ ನಂತರ ಸಿದ್ದರಾಮಯ್ಯ ಅವರ ಪರವಾಗಿ ಯಾರೋ ಹೋಗಿ ವೈಟ್ನರ್‌ ಹಚ್ಚಿ ಬಂದಿದ್ದಾರೆಂದು” ಬೊಬ್ಬೆ ಹಾಕುತ್ತಿದ್ದ ಸ್ವಯಂ ಘೋಷಿತ ಕಾನೂನು ಪಂಡಿತರು ಈಗೇನು ಹೇಳುತ್ತಾರೆ? ಆತುರದಲ್ಲಿ ಮೂಗು ಕತ್ತರಿಸಿಕೊಂಡು, ರಾತ್ರಿಯೆಲ್ಲ ಕನ್ನಡಿ ಮುಂದೆ ನಿಂತು ಕಣ್ಣೀರು ಹಾಕಿದ್ದರಂತೆ ಹಾಗಾಯಿತು ಕೆಲವು ಅತಿ ಬುದ್ದಿವಂತರ ಕತೆ.

ಕಪೋಲ ಕಲ್ಪಿತ ಕಟ್ಟುಕತೆಗಳ ಮೂಲಕ

ನನ್ನನ್ನು ಹಾಗೂ ನನ್ನ ಕುಟುಂಬವನ್ನು ವಿನಾಃಕಾರಣ ಅಪರಾಧಿಗಳಂತೆ ಬಿಂಬಿಸಿ ಬಾಯಿಗೆ ಬಂದಂತೆ ಮಾತನಾಡಿರುವ ಬಿಜೆಪಿ – ಜೆಡಿಎಸ್‌ ಪಕ್ಷಗಳ ವಿವೇಕ ಶೂನ್ಯ ನಾಯಕರು ಇಂದು ಜನರೆದುರು ಬೆತ್ತಲಾಗಿದ್ದಾರೆ. ಸತ್ಯ ಹಾಗೆಯೇ, ಅರಿವಿಗೆ ಬರುವುದು ಸ್ವಲ್ಪ ತಡವಾಗಬಹುದು, ಆದರೆ ಅಂತಿಮ ಗೆಲುವು ಸತ್ಯದ್ದೇ ಆಗಿರುತ್ತದೆ. ಎಂದು ಸಿಎಂ ತಿರುಗೇಟು ಕೊಟ್ಟಿದ್ದಾರೆ.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist