ಬೆಂಗಳೂರು, (www.thenewzmirror.com) ;
ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಆದೇಶವನ್ನು ಎತ್ತಿ ಹಿಡಿದಿದೆ. ಈ ಮೂಲಕ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಬಿಗ್ ಶಾಕ್ ನೀಡಿದೆ.
ಯಾವಾಗ ಹೈ ಕೋರ್ಟ್ ರಾಜ್ಯಪಾಲರ ತೀರ್ಮಾನವನ್ನ ಎತ್ತಿ ಹಿಡಿದಿದೆ. ಇದರ ಬೆನ್ನಲ್ಲೇ ವಿಪಕ್ಷಗಳು ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹಿಸಿವೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದು, ರಾಜ್ಯಪಾಲರ ನಡೆಯನ್ನ ವಿರೋಧ ಮಾಡೋದನ್ನ ಮೊದಲು ಬಿಡಿ ಅಂತ ಸಲಹೆ ಕೊಟ್ಟಿದ್ದಾರೆ.
ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದಾಗಿನಿಂದ ಮುಖ್ಯಮಂತ್ರಿ ಆದಿಯಾಗಿ, ಸಚಿವರು, ಶಾಸಕರು ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಕಳೆದ ಅನೇಕ ದಿನಗಳಿಂದ ರಾಜ್ಯಪಾಲರನ್ನ, ರಾಜಭವನವನ್ನ ನಿಂದಿಸುತ್ತಾ ಬಂದಿದ್ದು, ಇದನ್ನ ನಿಲ್ಲಿಸಿ ಹಾಗೆನೇ ಪಾರದರ್ಶಕ ತನಿಖೆ ಆಗಬೇಕಾದ್ರೆ ಮೊದಲು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಅಂತ ಆಗ್ರಹಿಸಿದ್ದಾರೆ.
ವಿಪಕ್ಷ ನಾಯಕ ಏನಂದರು.?
ರಾಜ್ಯಪಾಲರು ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ @siddaramaiah ನವರ ವಿರುದ್ಧ ಪ್ರಾಸಿಕ್ಯೂಷನ್ ಗೆ ನೀಡಿದ್ದ ಅನುಮತಿ ಕಾನೂನುಬದ್ಧವಾಗಿದೆ ಎಂದು ಮಾನ್ಯ ಹೈಕೋರ್ಟ್ ರಾಜ್ಯಪಾಲರ ನಿರ್ಧಾರವನ್ನ ಎತ್ತಿಹಿಡಿದಿದ್ದು, ಇದು ಸತ್ಯಕ್ಕೆ ಸಂದ ಜಯವಾಗಿದೆ.
ಮಾನ್ಯ ಹೈಕೋರ್ಟ್ ನ ತೀರ್ಪು ಇಡೀ @INCKarnataka ಪಕ್ಷಕ್ಕೆ ಛಡಿ ಏಟು ಕೊಟ್ಟಿದೆ. ಇನ್ನಾದರೂ ಅನಗತ್ಯವಾಗಿ ರಾಜ್ಯಪಾಲರನ್ನ ನಿಂದಿಸುವುದು ಬಿಟ್ಟು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೈತಿಕೆ ಹೊಣೆ ಹೊತ್ತು
ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಆರ್. ಅಶೋಕ ಆಗ್ರಹಿಸಿದ್ದಾರೆ.