Mysore Dasara 2024 | ದಸರಾ ಉತ್ಸವ ಅದ್ಧೂರಿ ಆಚರಣೆ ಹೆಸರಲ್ಲಿ ಹಗರಣಕ್ಕೆ ವೇದಿಕೆಯಾಗದಿರಲಿ: ವಿಪಕ್ಷ ನಾಯಕ ಆರ್. ಅಶೋಕ ಸಲಹೆ

Opposition leader R. Ashoka has demanded that the NIA investigate the communal riots

ಬೆಂಗಳೂರು/ಮೈಸೂರು,(www.thenewzmirror.com) ;

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉತ್ಸವವನ್ನ ಅದ್ಧೂರಿಯಾಗಿ ಆಚರಿಸಲು ತೀರ್ಮಾನ ಮಾಡಿರುವ ಸರ್ಕಾರದ ನಿರ್ಧಾರವನ್ನ ವಿಪಕ್ಷ ನಾಯಕ ಆರ್. ಅಶೋಕ ಸ್ವಾಗತಿಸಿದ್ದಾರೆ.

RELATED POSTS

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಕುರಿತು ಪೋಸ್ಟ್ ಹಾಕಿರುವ ಅಶೋಕ್, ಅದ್ಧೂರಿ ದಸರಾ, @INCKarnataka ಸರ್ಕಾರದದ ಮತ್ತೊಂದು ಅದ್ಧೂರಿ ಹಗರಣಕ್ಕೆ ವೇದಿಕೆ ಆಗದಿರಲಿ ಎನ್ನುವುದೇ ಕನ್ನಡಿಗರ ಆಶಯ ವ್ಯಕ್ತಪಡಿಸಿದ್ದಾರೆ.

ಕಳೆದ ವರ್ಷ ಅಂತರರಾಷ್ಟ್ರೀಯ ಖ್ಯಾತಿಯ ಸರೋದ್ ವಾದಕ  ಪಂಡಿತ್ ತಾರಾನಾಥ್ ಅವರ ಬಳಿಯೂ ಪರ್ಸಂಟೇಜ್ ಕಮಿಷನ್ ಕೇಳಿ ಕರ್ನಾಟಕದ ಮಾನ ಹಾರಾಜು ಹಾಕಿದ್ದ ಕಾಂಗ್ರೆಸ್ ಸರ್ಕಾರ, ಈ ವರ್ಷವಾದರೂ ನಾಡಹಬ್ಬ ದಸರಾ ಮಹೋತ್ಸವಕ್ಕೆ ಭ್ರಷ್ಟಾಚಾರದ ಸೋಂಕು ತಗುಲಿಸದೆ ನಾಡಿನ ಸಂಸ್ಕೃತಿ, ಪರಂಪರೆಯ ಗೌರವ ಉಳಿಸುತ್ತೋ ಅಥವಾ ಈ ವರ್ಷವೂ ಮತ್ತೊಂದು ಭ್ರಷ್ಟಾಚಾರದ ಅಂಬಾರಿ ಹೊತ್ತು ಕನ್ನಡಿಗರ ಮಾನ ಕಳಿಯುತ್ತೋ ಕಾದು ನೋಡಬೇಕು ಎಂದಿದ್ದಾರೆ.

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಅಂದರೆ ಅದು ಕರ್ನಾಟಕದ ಭವ್ಯ ಸಾಂಸ್ಕೃತಿಕ ಪರಂಪರೆಯ ಪ್ರತೀಕ. ಇಡೀ ದೇಶವೇ, ಪ್ರಪಂಚವೇ ಎದುರು ನೋಡುವ ಇಂತಹ ಉತ್ಸವವನ್ನ ರಾಜ್ಯ ಸರ್ಕಾರ ಅತ್ಯಂತ ಆಸಕ್ತಿ, ಶ್ರದ್ಧೆ, ಭಕ್ತಿಗಳಿಂದ ಆಚರಿಸಬೇಕು. ಇಲ್ಲವಾದರೆ ಈ ಸರ್ಕಾರ ಆ ತಾಯಿ ಚಾಮುಂಡೇಶ್ವರಿಯ ಶಾಪಕ್ಕೆ ಗುರಿಯಾಗುವುದು ನಿಶ್ಚಿತ ಅಂತ ಎಚ್ಚರಿಸಿದ್ದಾರೆ.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist