ರಾಜ್ಯ ಸರ್ಕಾರದ ಮತ್ತೊಂದು ವಿವಾದಾತ್ಮಕ ಸುತ್ತೋಲೆ..! ಇನ್ಮುಂದೆ ಖಾಸಗಿ ಶಾಲೆಗಳಲ್ಲಿ ‘ನಾಡಗೀತೆ’ ಕಡ್ಡಾಯವಲ್ಲವಂತೆ..!

ಬೆಂಗಳೂರು, (www.thenewzmirror.com)

ಕಳೆದ ಎರಡು ದಿನಗಳ ಹಿಂದೆ ವಸತಿ ಶಾಲೆಯಲ್ಲಿನ ಬರಹಗಳಲ್ಲಿನ ವಿವಾದಕ್ಕೆ ಕಾರಣವಾಗಿದ್ದ ರಾಜ್ಯ ಇದೀಗ ಮತ್ತೊಂದು ವಿವಾದಕ್ಕೆ‌ ಕಾರಣವಾಗಿದೆ. ಈಗ ನಾಡಗೀತೆ ಹಾಡುವುದಕ್ಕೆ ಸಂಬಂಧಪಟ್ಟಂತೆ ಆದೇಶವನ್ನು ಹೊರಡಿಸಿದ್ದು, ಆದೇಶದಲ್ಲಿ ಖಾಸಗಿ ಶಾಲೆಯಲ್ಲಿ ನಾಡಗೀತೆ ಹಾಡುವುದು ಕಡ್ಡಾಯ ಅಲ್ಲ ಎನ್ನುವುದನ್ನು ಉಲ್ಲೇಖ ಮಾಡಿದೆ.

RELATED POSTS

ಇಷ್ಟು ದಿನ ನಾಡಗೀತೆ ಹಾಡುವುವು ಕಡ್ಡಾಯವಾಗಿತ್ತು. ಇದೀಗ ಆ ಸುತ್ತೋಲೆಯನ್ನ ಮಾರ್ಪಾಡು ಮಾಡಿದ್ದು, ಕಡ್ಡಾಯವಲ್ಲ ಎಂದು ಆದೇಶ ಹೊರಡಿಸಿದೆ.

ಹಾಗಿದ್ರೆ ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶದಲ್ಲಿ ಏನಿದೆ ಎನ್ನುವುದನ್ನ ನೋಡುವುದಾದರೆ.., ರಾಷ್ಟ್ರಕವಿ ಜ್ಞಾನಪೀಠ ಪುರಸ್ಕೃತರಾದ ಡಾಕುವೆಂಪುರವರ ‘ಜಯ ಭಾರತ ಜನನಿಯ ತನುಜಾತೆ” ಕವನವನ್ನು ‘ನಾಡಗೀತೆ’ಯಾಗಿ ಘೋಷಿಸುವ ಕುರಿತು ಹೊರಡಿಸಲಾದ ಸರ್ಕಾರದ ಆದೇಶ ಸಂಖ್ಯೆ: ಸಂಕಇ 207 ಕಸದ 2003, ದಿನಾಂಕ:07-01-2004ರ ಹಾಗೂ ತಿದ್ದುಪಡಿ ದಿನಾಂಕ:01-02-2024ರ “(ಇ) ಎಲ್ಲಾ ಶಾಲೆಗಳಲ್ಲಿ ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಪ್ರಾರಂಭದಲ್ಲಿ ಹಾಡುವುದು” ಎಂಬುದರ ಬದಲಾಗಿ ಸರ್ಕಾರಿ ಶಾಲೆಗಳು, ಅನುದಾನಿತ ಶಾಲೆಗಳಲ್ಲಿ ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಪ್ರಾರಂಭದಲ್ಲಿ ಹಾಡುವುದು” ಎಂದು ತಿದ್ದಿ ಓದಿಕೊಳ್ಳತಕ್ಕದ್ದು ಎಂದು ಕನ್ನಡ ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist