ಬೆಂಗಳೂರು, (www.thenewzmirror.com) ;
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಇತ್ತೀಚೆಗೆ ಗಣೇಶ ಉತ್ಸವದ ಮೆರವಣಿಗೆ ವೇಳೆ ಗಲಭೆ ನಡೆದು, ಕಲ್ಲು ತೂರಾಟ, ಪೆಟ್ರೋಲ್ ಬಾಂಬ್ ಎಸೆತ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಗಲಭೆಯ ಹಿಂದೆ ಕೇರಳ ಲಿಂಕ್ ಇರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.
ನಾಗಮಂಗಲ ಗಲಭೆಯಲ್ಲಿ ನಿಷೇಧಿತ ಪಿಎಫ್ಐ ಸಂಘಟನೆ ಸದಸ್ಯರು ಭಾಗಿಯಾಗಿದ್ದಾರೆ. ಪಕ್ಕಾ ಪ್ಲಾನ್ ಮಾಡಿ ಗಲಾಟೆ ಮಾಡಿದ್ದಾರೆ ಎಂದು FIR ನಲ್ಲಿ ಉಲ್ಲೇಖವಾದ ಅಂಶಗಳಿಂದ ತಿಳಿದು ಬಂದಿದೆ. ಘಟನೆ ಕುರಿತಂತೆ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ನಲ್ಲಿ ಇಬ್ಬರು ಕೇರಳ ಮೂಲದವರ ಹೆಸರಿದ್ದು, ಬಂಧಿತ 74 ಆರೋಪಿಗಳ ಪೈಕಿ ಇಬ್ಬರು ಕೇರಳ ಮೂಲದವರಾಗಿದ್ದಾರೆ.
FIR ನಲ್ಲಿ 44ನೇ ಆರೋಪಿ ಯೂಸೂಫ್, 61ನೇ ಆರೋಪಿ ನಾಸೀರ್ ಕೇರಳದ ಮಲಪ್ಪುರಂ ನಿವಾಸಿಗಳಾಗಿದ್ದಾರೆ. ಇಬ್ಬರೂ ಕೆಲ ದಿನಗಳಿಂದ ನೆಲಮಂಗಲದಲ್ಲಿ ವಾಸವಾಗಿದ್ದರು. ಇಬ್ಬರೂ ನಿಷೇಧಿತ ಪಿಎಫ್ಐ ಸಂಘಟನೆ ಸದಸ್ಯರೆಂದು ತಿಳಿದುಬಂದಿದೆ.
NIA ಗೆ ವಹಿಸುವಂತೆ ಆರ್ ಅಶೋಕ ಆಗ್ರಹ
ನಾಗಮಂಗಲ ಗಲಭೆ ಹಿಂದೆ ಕೇರಳ ಲಿಂಕ್ ಇರುವ ಬಗ್ಗೆ ಹಾಗೂ ನಿಷೇಧಿತ ಪಿಎಫ್ಐ ಸಂಘಟನೆ ಕೈವಾಡದ ಅನುಮಾನ ಇರುವ ಬಗ್ಗೆ ವಿಶ್ವ ಹಿಂದೂ ಪರಿಷತ್ ಆರೋಪಿಸಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ವಿಪಕ್ಷ ನಾಯಕ ಆರ್ ಅಶೋಕ ಒತ್ತಾಯಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮನವಿ ಮಾಡಿರುವ ಅಶೋಕ, ಕೋಮುಗಲಭೆಯಲ್ಲಿ PFI, KFD ಅಂತಹ ನಿಷೇಧಿತ ಸಂಘಟನೆಗಳ ನಂಟು ಹೊಂದಿರುವ ಕೇರಳ ಮೂಲದ ವ್ಯಕ್ತಿಗಳ ಕೈವಾಡವಿದೆ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದು, ಈ ದುರುಳರು ಗಲಭೆಗೊ ಮುನ್ನ 150 ಮಾಸ್ಕ ಖರೀದಿಸಿದ್ದಾರೆ, ಸಿಸಿಟಿವಿಗಳನ್ನ ನಾಶ ಮಾಡಿದ್ದಾರೆ, ಮತ್ತು ಈ ದುಷ್ಕೃತ್ಯ ಸಂಪೂರ್ಣ ಪ್ರಾಯೋಜಿತ ಮತ್ತು ಪೂರ್ವನಿಯೋಜಿವಾಗಿದೆ ಎಂಬುದು ಸ್ಥಳೀಯರ ಅನುಮಾನವಾಗಿದೆ.
ಅಷ್ಟೇ ಅಲ್ಲದೆ ಸರ್ಕಾರ ದಾಖಲಿಸಿರುವ FIR ನಲ್ಲಿ ಮೊದಲ 23 ಆರೋಪಿಗಳು ಹಿಂದೂಗಳೇ ಆಗಿರುವುದರಿಂದ ಪೋಲಿಸರು ನಿಷೇಧಿತ ಸಂಘಟನೆಗಳ ಒತ್ತಡದಲ್ಲಿದ್ದಾರೆಯೇ ಎಂಬ ಸಂದೇಹ ಮೂಡುತ್ತಿದೆ.
ಈ ಕೋಮುಗಲಭೆಯಲ್ಲಿ ನಿಷೇಧಿತ ಸಂಘಟನೆಗಳು ಮತ್ತು ಮತೀಯ ಮೂಲಭೂತವಾದಿಗಳ ಕೈವಾಡವಿರುವ ಬಲವಾದ ಸಂದೇಹವಿರುವುದರಿಂದ ಸ್ಥಳೀಯ ಪೋಲಿಸರು ಈ ಪ್ರಕರಣವನ್ನ ಬೇಧಿಸುವುದು ಕಷ್ಟಸಾಧ್ಯವಾಗಿದ್ದು, ಈ ನಿಟ್ಟಿನಲ್ಲಿ ಈ ಪ್ರಕರಣವನ್ನ NIA ಗೆ ವಹಿಸಬೇಕು ಎಂದು ಸಿಎಂ @siddaramaiah ಹಾಗು ಗೃಹ ಸಚಿವ @DrParameshwara ಅವರನ್ನ ಒತ್ತಾಯಿಸಿದ್ದಾರೆ.