ಬೆಂಗಳೂರು/ನವದೆಹಲಿ, (www.thenewzmirroe.com) :
ರಸ್ತೆಯಲ್ಲೇ ನಮಾಜ್ ಮಾಡುತ್ತಿದ್ದವರನ್ನು ಪೊಲೀಸ್ ಅಧಿಕಾರಿಯೊಬ್ಬರು ಒದ್ದು ಎಬ್ಬಿಸಿದ ಘಟನೆಯೊಂದು ದೆಹಲಿಯ ಇಂದರ್‌ಲೋಕ್ ಬಳಿ ನಡೆದಿದೆ.
ಶುಕ್ರವಾರ ಆಗಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ನಮಾಜ್ ಮಾಡಲು ದೆಹಲಿಯ ಇಂದರ್‌ಲೋಕ್ ಪ್ರದೇಶದ ರಸ್ತೆಯನ್ನು ಬಳಸಿಕೊಳ್ಳಲಾಗಿತ್ತು. ಇದರಿಂದ ಟ್ರಾಫಿಕ್ ಸಮಸ್ಯೆ ಉಂಟಾಗಿತ್ತು. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಅಧಿಕಾರಿ ರಸ್ತೆಯಲ್ಲಿ ನಮಾಜ್ ಮಾಡುತ್ತಿದ್ದವರನ್ನು ಬೂಟು ಕಾಲಿನಿಂದ ಒದ್ದು ಎಬ್ಬಿಸಿದ್ದಾರೆ.
ಪೊಲೀಸ್ ಅಧಿಕಾರಿಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪೊಲೀಸ್ ಅಧಿಕಾರಿಯ ವರ್ತನೆ ವಿರುದ್ಧ ಕಿಡಿಕಾರಿದ್ದಾರೆ.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತಿದ್ದಂತೆ ಎಚ್ಚೆತ್ತ ಹಿರಿಯ ಪೊಲೀಸ್ ಅಧಿಕಾರಿ ಘಟನೆ ಸಂಬಂಧ ತನಿಖೆ ನಡೆಸಲಾಗುತ್ತದೆ ಅಲ್ಲಿಯವರೆಗೆ ಪೊಲೀಸ್ ಅಧಿಕಾರಿಯನ್ನು ಅಮಾನತಿನಲ್ಲಿ ಇಡಲಾಗುವುದು ಎಂದು ಹೇಳಿದ್ದಾರೆ.
ನಮಾಜ್ ಮಾಡುವವರ ಮೇಲೆ ಕಾಲಿನಿಂದ ಒದ್ದು ಅಮಾನವೀಯ ಕೃತ್ಯ ಎಸಗಿದ ಪೊಲೀಸ್ ಅಧಿಕಾರಿಯ ಕೃತ್ಯಕ್ಕೆ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ ಅಲ್ಲದೆ ಆತನ ಮನಸ್ಸಿನಲ್ಲಿ ಅದೆಷ್ಟು ದ್ವೇಷದ ಭಾವನೆಯನ್ನು ತುಂಬಲಾಗಿತ್ತು ಇದನ್ನು ಇಲ್ಲಿ ಹೊರಹಾಕಿದ್ದಾನೆ ಎಂದು ಹೇಳುವ ಮೂಲಕ ಆಕ್ರೋಶವನ್ನು ಹೊರಹಾಕಿದ್ದಾರೆ.