NDA ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು

ಬೆಂಗಳೂರು: (www.thenewzmirror.com) ;

ಭಾರೀ ಕುತೂಹಲ ಹುಟ್ಟಿಸಿದ ಬಿಜೆಪಿ ರಾಷ್ಟ್ರಪತಿ ಅಭ್ಯರ್ಥಿ ಹೆಸರು ಹೊರಬಿದ್ದಿದೆ. ಬಿಜೆಪಿಯಿಂದ ರಾಷ್ಟ್ರಪತಿ ಹುದ್ದೆಗೆ ಜಾರ್ಖಂಡ್‌ನ ಮಾಜಿ ರಾಜ್ಯಪಾಲ ದ್ರೌಪದಿ ಮುರ್ಮು ಆಯ್ಕೆಯಾಗಿದ್ದಾರೆ.

RELATED POSTS

ಒಡಿಶಾದ ಬುಡಕಟ್ಟು ಜನಾಂಗದ ದ್ರೌಪದಿ ಮುರ್ಮು ಅವರು ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ (Yashwant Sinha) ವಿರುದ್ಧ ಸ್ಪರ್ಧಿಸಲಿದ್ದಾರೆ.

ದ್ರೌಪದಿ ಮುರ್ಮು ಅವರು ಪರಿಶಿಷ್ಟ ಬುಡಕಟ್ಟು ಜಾತಿ ಸಮುದಾಯಕ್ಕೆ ಸೇರಿದರಾಗಿದ್ದು, 2015-2021 ರವರೆಗೂ ಜಾರ್ಖಂಡ್‌ನ ರಾಜ್ಯಪಾಲೆಯಾಗಿ ಆಡಳಿತ ನಡೆಸಿದ್ದರು.

ದ್ರೌಪದಿ ಮುರ್ಮು ಹಿನ್ನಲೆ

ಬಿಜೆಪಿಯ ಸಿದ್ಧಾಂತಗಳಿಗೆ ಸರಿಯಾಗಿ ಒಗ್ಗುವ ಮಹಿಳೆ ಎನಿಸಿಕೊಂಡಿರುವ ದ್ರೌಪದಿ, ಪ್ರಸಿದ್ಧ ಬುಡಕಟ್ಟು ನಾಯಕಿ ಮಾತ್ರವಲ್ಲದೆ ಸಮರ್ಥ ಆಡಳಿತಗಾರರೂ ಆಗಿದ್ದು, ಜಾರ್ಖಂಡ್ ನ ಮೊದಲ ರಾಜ್ಯಪಾಲೆಯಾಗಿ ಯಶಸ್ವಿಯಾಗಿ ಹುದ್ದೆಯನ್ನ ನಿಭಾಯಿಸಿದ್ದಾರೆ‌.

ಒಡಿಶಾದಲ್ಲಿ ಬಿಜೆಡಿ ಹಾಗೂ ಬಿಜೆಪಿ ಸಹಯೋಗದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾಗಿದ್ದ ಸಮಯದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದ ದ್ರೌಪದಿ ಮುರ್ಮು, ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರೊಂದಿಗೆ ಉತ್ತಮ ಸ್ನೇಹವನ್ನೂ ಹೊಂದಿದ್ದಾರೆ ಎನ್ನಲಾಗುತ್ತಿದೆ. ಹಾಗೆನೇ ದ್ರೌಪದಿ ಮುರ್ಮುಗೆ ನವೀನ್ ಪಟ್ನಾಯಕ್ ನೇತೃತ್ವದ ಬಿಜೆಡಿಯ ಬೆಂಬಲವೂ ಇದೆ.

1958ರ ಜೂನ್ 20 ರಂದು. 64 ವರ್ಷದ ಮುರ್ಮು ಅವರು ಜಾರ್ಖಂಡ್ ರಾಜ್ಯದ 9ನೇ ರಾಜ್ಯಪಾಲೆಯಾಗಿ ಸೇವೆ ಸಲ್ಲಿಸಿದ್ದರು. ಜಾರ್ಖಂಡ್‌ನ ಒಂಬತ್ತನೇ ಗವರ್ನರ್ ಆಗಿದ್ದ ಭಾರತೀಯ ರಾಜಕಾರಣಿ.

ವಿಪಕ್ಷಗಳು ಯಶವಂತ್ ಸಿನ್ಹಾ ಅವರ ಹೆಸರನ್ನು ರಾಷ್ಟ್ರಪತಿ ಅಭ್ಯರ್ಥಿ ಸ್ಥಾನಕ್ಕೆ ಸೂಚಿಸಿದ್ದು, ವಿರೋಧ ಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.

ಬಿಜೆಪಿ ಮುರ್ಮು ಅವ್ರನ್ನ ತಮ್ಮ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿರೋ ಹಿಂದೆ ಮುಂಬರೋ ಚುನಾವಣೆಯಲ್ಲಿ ಬುಡಕಟ್ಟು ಮತಗಳ ಹಂಚಿಕೆಯ ಮೇಲೆ ಪರಿಣಾಮ ಬೀರುವುದಲ್ಲದೆ ಒಡಿಶಾದಲ್ಲಿ ಬಿಜೆಪಿಯ ಭವಿಷ್ಯವನ್ನು ನಿರ್ಧರಿಸಲಿದೆ ಎಂದೇ ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಡ್ತಿದ್ದಾರೆ.

ಹಾಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅವಧಿ ಜುಲೈ 24ರಂದು ಮುಕ್ತಾಯವಾಗಲಿದೆ. ಜುಲೈ 18ರಂದು ಹೊಸ ರಾಷ್ಟ್ರಪತಿ ಚುನಾವಣೆ ನಡೆಯಲಿದೆ.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist