ತುಮಕೂರಿನ ಎಲ್ಲಾ ತಾಲೂಕಿಗೂ ನೀರು ಒದಗಿಸಲು ಅಗತ್ಯ ಕ್ರಮ: ಡಿಸಿಎಂ

RELATED POSTS

ಬೆಂಗಳೂರು(www.thenewzmirror.com):“ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ. ಎಲ್ಲಾ ತಾಲೂಕಿಗೂ ನೀರು ಒದಗಿಸಲು ನಮ್ಮ ಸರ್ಕಾರ ಬದ್ದವಾಗಿದ್ದು ಅದಕ್ಕೆ ಪೂರಕವಾದ ಯೋಜನೆ ರೂಪಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಅವರು,”ಹೇಮಾವತಿ ಲಿಂಕ್ ಕೆನಾಲ್ ವಿಚಾರವಾಗಿ ಜನಪ್ರತಿನಿಧಿಗಳ ಸಭೆ ಕರೆದು, ಅವರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಈ ಹಿಂದೆ ಶಾಸಕರು ತಾಂತ್ರಿಕ ಸಮಿತಿ ರಚಿಸಿ ಎಂದಿದ್ದರು. ತಾಂತ್ರಿಕ ಸಮಿತಿ ವರದಿ ನಂತರ ಕಾಮಗಾರಿಗೆ ಮುಂದಾದರೂ ಮತ್ತೆ ಪ್ರತಿಭಟನೆ ಮಾಡಿದ್ದರು. ಅವರು ಪೈಪ್ ಲೈನ್ ಹಾಕಬೇಡಿ ತೆರೆದ ಕಾಲುವೆಯಲ್ಲಿ ನೀರು ತೆಗೆದುಕೊಂಡು ಹೋಗಿ ಎಂದು ಹೇಳುತ್ತಿದ್ದಾರೆ ಆದರೆ ಪೈಪ್ ಲೈನ್ ಮಾಡುವುದು ಸರ್ಕಾರದ ತೀರ್ಮಾನ” ಎಂದು ಸ್ಪಷ್ಟಪಡಿಸಿದರು.

“ಕೇಂದ್ರ ಸಚಿವ ಸೋಮಣ್ಣ ಅವರು ಭಾರತೀಯ ವಿಜ್ಞಾನ ಸಂಸ್ಥೆ ತಜ್ಞರಿಂದ ಪರಿಶೀಲನೆಗೆ ಶಿಫಾರಸ್ಸು ಮಾಡಿದ್ದು, ಇದಕ್ಕೆ ಒಪ್ಪಿಗೆ ನೀಡಲಾಗಿದೆ. ನಮಗೆ ಕೇವಲ ಕುಣಿಗಲ್ ತಾಲೂಕು ಮಾತ್ರವಲ್ಲ. ಇಡೀ ತುಮಕೂರು ಜಿಲ್ಲೆಗೆ ನೀರು ಒದಗಿಸಬೇಕಿದೆ, ಅದಕ್ಕೆ ಪೂರಕವಾಗಿ ನಾನು ಯೋಜನೆ ಸಿದ್ಧಪಡಿಸಿದ್ದೇನೆ. ಯಾರಿಗೂ ಅನ್ಯಾಯವಾಗದ ರೀತಿಯಲ್ಲಿ ನೀರನ್ನು ಹಂಚಲಾಗುವುದು. ಜಿಲ್ಲೆಯ ಎಲ್ಲಾ ತಾಲ್ಲೂಕಿನ ಹಿತಕಾಯಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದರು.

“ನಮ್ಮ ಸರ್ಕಾರ ಇದ್ದಾಗ ಯೋಜನೆ ಆರಂಭಿಸಿ ಕಾಮಗಾರಿ ನಡೆಸಿದ್ದೆವು. ಬಿಜೆಪಿ ಸರ್ಕಾರ ಇದನ್ನು ನಿಲ್ಲಿಸಿತ್ತು. ನನ್ನ ಕ್ಷೇತ್ರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜನ್ನು ವಾಪಸ್ ಪಡೆದರು. ಈ ಯೋಜನೆ ಮುಂದುವರಿಸುವುದಾಗಿ ಯಡಿಯೂರಪ್ಪ ಹೇಳಿದರೂ ನಂತರ ಅದನ್ನು ಚಿಕ್ಕಬಳ್ಳಾಪುರಕ್ಕೆ ಸ್ಥಳಾಂತರ ಮಾಡಿದರು. ಇದೆಲ್ಲವೂ ಸರ್ಕಾರದ ತೀರ್ಮಾನ. ಮೆಡಿಕಲ್ ಕಾಲೇಜು ನಿರ್ಮಾಣದ ಯೋಜನೆ 600 ಕೋಟಿಯಿಂದ 900 ಕೋಟಿಗೆ ಏರಿಕೆಯಾಗಿದೆ. ಇದಕ್ಕೆ ಜವಾಬ್ದಾರಿ ಯಾರು?” ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist