ಬೆಂಗಳೂರು, (www.thenewzmirror.com);
ಬಿಹಾರದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ನಡುವೆ 9 ನೇ ಬಾರಿ ನಿತೀಶ್ ಕುಮಾರ್ ಬಿಜೆಪಿ ಬೆಂಬಲದೊಂದಿಗೆ ಬಿಹಾರದ ಮುಖ್ಯಮಂತ್ರಿ ಆಗ್ತಾರೆ ಎಂದೇ ವಿಶ್ಲೇಷಿಸಲಾಗುತ್ತಿದೆ.
ಮೂಲಗಳ ಪ್ರಕಾರ ಬಿಜೆಪಿ ಬೆಂಬಲ ಪಡೆದು ಭಾನುವಾರ(ಜನವರಿ 28) ರಂದು ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದು ತಿಳಿದು ಬಂದಿದ್ದು ಬಿಜೆಪಿಯಿಂದ ಇಬ್ಬರು ಡಿಸಿಎಂ ಸ್ಥಾನಗಳನ್ನ ಪಡೆದುಕೊಳ್ಳಲಿದೆ ಎನ್ನಲಾಗುತ್ತಿದೆ.
ನಿತೀಶ್ ಕುಮಾರ್ ಅವರು ಶನಿವಾರ ಬೆಳಗ್ಗೆ 10 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ಕರೆದಿದ್ದು, ಸಭೆಯಲ್ಲಿ ಮುಂದಿನ ನಿರ್ಧಾರದ ಬಗ್ಗೆ ತೀರ್ಮಾನ ಕೈಗೊಳ್ಳೋ ಸಾಧ್ಯತೆಯಿದೆ. ನಿತೀಶ್ ಸರ್ಕಾರವನ್ನ ವಿಸರ್ಜನೆ ಮಾಡುವಂಥ ದೊಡ್ಡ ತೀರ್ಮಾನ ಕೈಗೊಳ್ಳುವುದಿಲ್ಲ ಎನ್ನಲಾಗುತ್ತಿದೆ. ಕಾರಣ ಬಿಹಾರದಲ್ಲಿ ಮುಂದಿನ ವರ್ಷ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಜತೆಗೆ ಶೀಘ್ರದಲ್ಲೇ ಲೋಕಸಭಾ ಚುನಾವಣೆ ಎದುರಾಗಲಿದ್ದು, ಅದರ ಮೇಲೆ ನ ಹರಿಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಸಿಎಂ ನಿತೀಶ್ ಕುಮಾರ್ ಕಾಂಗ್ರೆಸ್-ಆರ್‌ಜೆಡಿ ಜೊತೆಗೆ ಇರುವ ಮೈತ್ರಿಕೂಟಕ್ಕೆ ವಿದಾಯ ಹೇಳಿ, ಬಿಜೆಪಿ ಜೊತೆ ಕೈಜೋಡಿಸಲಿದ್ದಾರೆ ಎಂಬ ಚರ್ಚೆ ನಡೆದಿತ್ತು.