ನವದೆಹಲಿ, (www.thenewzmirror.com) :
ಆರ್‌ಎಸ್‌ಎಸ್ ಮುಖಂಡ ಆರ್.ರುದ್ರೇಶ್ ಹತ್ಯೆಗೆ ಸಂಬಂಧಿಸಿದಂತೆ 2016 ರ ಕರ್ನಾಟಕ ಪ್ರಕರಣದಲ್ಲಿ ಪ್ರಮುಖ ಸಂಚುಕೋರ ಮತ್ತು ತಲೆಮರೆಸಿಕೊಂಡಿದ್ದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸದಸ್ಯನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಶುಕ್ರವಾರ ಬಂಧಿಸಿದೆ.
ಬೆಂಗಳೂರಿನ ಶಿವಾಜಿನಗರದ ಪ್ರಮುಖ ಆರ್‌ಎಸ್‌ಎಸ್ ಮುಖಂಡರಾದ ರುದ್ರೇಶ್ ರನ್ನ ನಿಷೇಧಿತ ಪಿಎಫ್‌ಐನ ನಾಲ್ವರು ಸದಸ್ಯರು 16 ಅಕ್ಟೋಬರ್ 2016 ರಂದು ಹತ್ಯೆ ಮಾಡಿದ್ದರು. ಇದಾದ ಬಳಿಕ ತನಿಖೆಯನ್ನ ರಾಜ್ಯ ಸರ್ಕಾರ ರಾಷ್ಟ್ರೀಯ ತನಿಖಾ ಸಂಸ್ಥೆ ಎನ್ ಐಗೆ ವಹಿಸಿತ್ತು.
ಘೌಸ್ ಬಂಧನದೊಂದಿಗೆ ಪ್ರಕರಣದ ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ. ವಿಚಾರಣೆ
ಉಳಿದ ಆರೋಪಿಗಳ ವಿರುದ್ಧ ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಮುಂದುವರಿದಿದೆ.