NIA Raid | ರಾಮೇಶ್ವರಂ ಬಾಂಬ್ ಬ್ಲಾಸ್ಟ್ ಹಿನ್ನಲೆ, ಬೆಂಗಳೂರು ಸೇರಿ 17 ಕಡೆ ದಾಳಿ ನಡೆಸಿದ NIA

ಬೆಂಗಳೂರು, (www.thenewzmirror.com) :

ರಾಮೇಶ್ವರಂ ಕೆಫೆ ಸ್ಫೋಟದ ನಂತರ ಎನ್‌ಐಎ ತಂಡ ಕಾರ್ಯಾಚರಣೆಗೆ ಇಳಿದಿದ್ದು, ಸಂಚುಕೋರರನ್ನು ಪತ್ತೆ ಹಚ್ಚಲು ತೀವ್ರ ತನಿಖೆ ನಡೆಸುತ್ತಿದೆ. ಈ ನಿಟ್ಟಿನಲ್ಲಿ ಎನ್ ಐಎ 7 ರಾಜ್ಯಗಳ 17 ಸ್ಥಳಗಳಲ್ಲಿ ಶೋಧ ನಡೆಸಿದೆ.

RELATED POSTS

ಜೈಲಿನಲ್ಲಿ ಸಹ ಕೈದಿಗಳನ್ನು ಸೆಳೆದು ಉಗ್ರ ಚಟುವಟಿಕೆಗೆ ಬಳಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (NIA) ಕರ್ನಾಟಕ ಸೇರಿದಂತೆ ದೇಶದ 17 ಕಡೆ ದಾಳಿ ನಡೆಸಿದೆ.

ಕಳೆದ ಜುಲೈನಲ್ಲಿ ಆರ್‌ಟಿ ನಗರದ ಮನೆ ಮೇಲೆ ದಾಳಿ ಮಾಡಿದ ಬೆಂಗಳೂರು ಸಿಸಿಬಿ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದರು.

ಈ ವೇಳೆ ಜೀವಂತ ಗ್ರೆನೇಡ್‌ ಪತ್ತೆಯಾಗಿತ್ತು. ಈ ಪ್ರಕರಣದ ಆರೋಪಿಗಳ ಜೊತೆ ಜೈಲಿನಲ್ಲಿದ್ದ ಉಗ್ರ ಟಿ.ನಾಸೀರ್ (T Naseer) ಸಂಪರ್ಕ ಬೆಳೆಸಿದ್ದ ವಿಚಾರ ತನಿಖೆಯಿಂದ ಬಯಲಾಗಿತ್ತು. ನಂತರ ಈ ಪ್ರಕರಣ ಎನ್‌ಐಎಗೆ ವರ್ಗಾವಣೆಯಾಗಿತ್ತು

ಈ ವರ್ಷದ ಜನವರಿ 12 ರಂದು ಎನ್‌ಐಎ ಈ ಪ್ರಕರಣದ ಸಂಬಂಧ 8 ಮಂದಿ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿತ್ತು. ಚಾರ್ಜ್‌ಶೀಟ್ ಮಾಡಿರುವ ಆರೋಪಿಗಳಲ್ಲಿ ಕೇರಳದ ಕಣ್ಣೂರು ಜಿಲ್ಲೆಯ ಟಿ ನಾಸೀರ್ 2013 ರಿಂದ ಬೆಂಗಳೂರಿನ ಸೆಂಟ್ರಲ್ ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾನೆ. ಉಳಿದ ಇಬ್ಬರು ಆರೋಪಿಗಳಾದ ಜುನೈದ್ ಅಹ್ಮದ್ ಅಲಿಯಾಸ್ ಜೆಡಿ ಮತ್ತು ಸಲ್ಮಾನ್ ಖಾನ್ ವಿದೇಶಕ್ಕೆ ಪರಾರಿಯಾಗಿದ್ದಾರೆ ಎಂದು ಶಂಕಿಸಲಾಗಿದೆ.

ಸಹ ಖೈದಿಗಳನ್ನ ಸೆಳೆದು ಉಗ್ರ ಕೃತ್ಯಕ್ಕೆ ಪ್ರೇರೇಪಣೆ ನೀಡಿದ ಹಿನ್ನೆಲೆಯಲ್ಲಿ ಇಂದು ಏಳು ರಾಜ್ಯದಲ್ಲಿ ಎನ್‌ಐಎ ದಾಳಿ ನಡೆಸಿದೆ. ಬೆಂಗಳೂರಿನ ಹೆಣ್ಣೂರು ಠಾಣಾ ವ್ಯಾಪ್ತಿಯ ತೂಬಾ ಲೇಔಟ್ ಮತ್ತು ಸರಾಯಿ ಪಾಳ್ಯದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ.

ಸೆರೆ ಸಿಕ್ಕ ಶಂಕಿತರ ಉಗ್ರರ ಹಿಂದೆ ಬ್ಯಾಕ್ ಬೋನ್ ಆಗಿದ್ದ ಮಾಸ್ಟರ್ ಮೈಂಡ್ ಜುನೈದ್ ವಿದೇಶದಲ್ಲಿದ್ದುಕೊಂಡೇ ಬೆಂಗಳೂರಿನಲ್ಲಿ ಬಂಧನಕ್ಕೆ ಒಳಗಾದವರನ್ನು ಸಾಕುತ್ತಿದ್ದ, ಬೆಂಗಳೂರಿನಲ್ಲಿದ್ದವರಿಗೆ ಲಕ್ಷ ಲಕ್ಷ ರೂ. ಫಂಡಿಂಗ್ ಮಾಡ್ತಿದ್ದ. ಜೊತೆಗೆ ಏನೇನು ಮಾಡಬೇಕು ಅಂತಾ ಟ್ರೈನಿಂಗ್ ಕೊಡ್ತಿದ್ದ. ಅದಕ್ಕಾಗಿ ಬೆಂಗಳೂರಿನಲ್ಲಿ ಎಲ್ಲೆಲ್ಲಿ ಕೃತ್ಯ ಎಸಬೇಕು ಅನ್ನೋದರ ನೀಲನಕ್ಷೆಯನ್ನೂ (ಬ್ಲೂ ಪ್ರಿಂಟ್) ಸಿದ್ಧ ಮಾಡಿಕೊಂಡಿದ್ದ.

ಟಿ. ನಝೀರ್ ಜೊತೆಗಿನ ಒಡನಾಟ ಮತ್ತು ಐಸಿಸ್ ಜೊತೆಗಿನ ಸಂಪರ್ಕದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಚೆನ್ಬೈನ ರಾಮನಾಥಪುರಂ ಜಿಲ್ಲೆಯ ಕೀಲಕಾರೈ ಪ್ರದೇಶದ ಬಳಿ ಶಂಶುದ್ದಿನ್ ಎಂಬುವರ ಮನೆಯ ಮೇಲೆ ದಾಳಿ ನಡೆದಿದೆ. ಹಲವು ಯುವಕರನ್ನು ಉಗ್ರವಾದಕ್ಕೆ ಪ್ರಚೋದನೆ ನೀಡಿದ ಆರೋಪ ಇವರ ಮೇಲಿದ್ದು, ಎನ್‌ಐಎ ಅಧಿಕಾರಿಗಳು ಆತನ ಮನೆಯನ್ನು ಶೋಧಿಸಿದ್ದು, ರಾಮೇಶ್ವರಂನಲ್ಲಿನ ಕೆಫೆ ದಾಳಿಯಲ್ಲಿ ಈತ ಭಾಗಿಯಾಗಿರುವ ಸಾಧ್ಯತೆಯ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist