Nita Ambani in Handloom saree| ಮಗನ ಮದುವೆ ಪೂರ್ವ ಕಾರ್ಯಕ್ರಮದಲ್ಲಿ ಕೈ ಮಗ್ಗದ ಕಾಂಚೀವರಂ ಸೀರೆಯುಟ್ಟು ಮಿಂಚಿದ ನೀತಾ ಅಂಬಾನಿ

ಬೆಂಗಳೂರು, www.thenewzmirror.com) :

ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ವಿವಾಹ ಪೂರ್ವ ಕಾರ್ಯಕ್ರಮದಲ್ಲಿ ನೀತಾ ಅಂಬಾನಿ ಅವರು ಕೈಮಗ್ಗದ ಕಾಂಚೀಪುರಂ ಸೀರೆಯನ್ನು ಧರಿಸಿದ್ದರು.

RELATED POSTS

ಈ ಸೀರೆಯ ವಿಶೇಷತೆ ಏನೆಂದರೆ, ಇದು ದಕ್ಷಿಣ ಭಾರತದ ನೇಕಾರರು ಕೈಯಿಂದಲೇ ಸಿದ್ಧಪಡಿಸಿದ್ದಾಗಿದೆ. ಇದನ್ನು ಕೈ ಮಗ್ಗದ ಸೀರೆ ಎನ್ನಲಾಗುತ್ತದೆ. ಯಂತ್ರಗಳಿಂದ ಅಲ್ಲದೆ, ಕುಶಲಕರ್ಮಿಗಳು ತಮಗೆ ತಲೆತಲಾಂತರದಿಂದ ಬಂದಂಥ ಅದ್ಭುತ ಕಲೆಯನ್ನು ಮೂಡಿಸಿರುವಂಥ ಮೇರು ಕಲಾಕೃತಿ ಇದು. ಭಾರತೀಯ ಸಾಂಪ್ರದಾಯಿಕ ಕರಕುಶಲತೆ ಬಗ್ಗೆ ನೀತಾ ಅಂಬಾನಿ ಅವರಿಗೆ ಇರುವಂಥ ಗೌರವ, ಪ್ರೀತಿಯನ್ನು ವ್ಯಕ್ತಪಡಿಸುವುದಕ್ಕೆ ಇದು ಇನ್ನೊಂದು ಸುಮಧುರ ಕ್ಷಣವಾಗಿತ್ತು.

ಭಾರತೀಯ ಕಲೆ ಮತ್ತು ಸಂಸ್ಕೃತಿಯ ಅಪ್ಪಟ ಪ್ರೇಮಿಯಾಗಿರುವ ನೀತಾ ಅಂಬಾನಿ ಅವರು ಅನಂತ್- ರಾಧಿಕಾ ವಿವಾಹ ಪೂರ್ವ ಕಾರ್ಯಕ್ರಮದ ಸಂದರ್ಭದಲ್ಲೂ ಸ್ಥಳೀಯ ಕಲಾವಿದರ ಅಮೋಘ ಕಲಾ ಕೌಶಲದ ಕಡೆಗೆ ಗಮನ ಸೆಳೆಯುವುದಕ್ಕೆ ಪ್ರಯತ್ನಿಸಿದರು.

ರಿಲಯನ್ಸ್ ನ ಸ್ವದೇಶ್ ಎಂಬ ಉಪಕ್ರಮವು ಸಮುದಾಯಗಳ ಕೈ ಬಲಪಡಿಸುತ್ತದೆ ಹಾಗೂ ಪಾರಂಪರಿಕ ಕರಕುಶಲತೆಯ ಸಂರಕ್ಷಣೆ ಮಾಡುತ್ತದೆ.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist