ಮಂಗಳೂರಿನಲ್ಲಿ ಶಾಂತಿ ಕದಡುತ್ತಿರುವವರು ಎಷ್ಟೇ ಪ್ರಭಾವಿಯಾಗಿದ್ದರೂ ಕ್ರಮ ಖಚಿತ:ಸಿಎಂ ಸಿದ್ದರಾಮಯ್ಯ

RELATED POSTS

ಬೆಂಗಳೂರು(www.thenewzmirror.com): ವಿಧಾನ ಪರಿಷತ್  ಸದಸ್ಯ ಬಿ.ಕೆ.ಹರಿಪ್ರಸಾದ್ ಅವರೊಂದಿಗೆ ಇಂದು  ಬೆಳಗಿನ ಉಪಾಹಾರ  ಮಾಡಿದ್ದು, ಸಾಮಾನ್ಯ ವಿಷಯಗಳ ಜೊತೆಗೆ  ಮಂಗಳೂರಿನಲ್ಲಿ ಸೌಹಾರ್ದತೆ ನೆಲೆಸಬೇಕು,  ದ್ವೇಷ ಯಾವುದೇ ಕಾರಣಕ್ಕೂ ಇರಬಾರದು ಎಂಬ ಬಗ್ಗೆ ಚರ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರ ಭೇಟಿ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಪ್ರಸ್ತುತ ಮಂಗಳೂರು ವಿದ್ಯಮಾನ ಕುರಿತು ಮಾತುಕತೆ ನಡೆಸಿದ್ದೇವೆ, ರಾಜಕೀಯ ವಿಚಾರಗಳೂ‌ ಚರ್ಚೆಯಾಗಿವೆ, ಕೋಮು ಗಲಭೆಗಳನ್ನು ಉಂಟುಮಾಡುವವರು  ಎಷ್ಟೇ ಪ್ರಭಾವಿಗಳಾಗಿದ್ದರೂ ಕೂಡ ಕಾನೂನಿನ ರೀತಿ ಕಠಿಣ  ಕ್ರಮ ಕೈಗೊಳ್ಳಲಾಗುವುದು.ಯಾರೂ ಕಾನೂನಿಗಿಂತ ದೊಡ್ಡವರಲ್ಲ ಎಂದರು.

ಡಿಸಿ ಸಿಇಒಗಳೊಂದಿಗೆ ಎರಡು ದಿನ ಸಭೆ:

ನಾಳೆ ಮತ್ತು ನಾಡಿದ್ದು ಎರಡು ದಿನಗಳ ಕಾಲ  ನಡೆಯಲಿರುವ ಡಿ.ಸಿ.ಹಾಗೂ ಸಿಇಒ ಗಳ ಸಭೆಯಲ್ಲಿ ಮುಂಗಾರು ಮಳೆ ಪರಿಸ್ಥಿತಿಗಳ ಬಗ್ಗೆ ಕೈಗೊಳ್ಳಲಾಗಿರುವ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಚರ್ಚಿಸಲಾಗುವುದು ಎಂದು ಇದೇ ವೇಳೆ ಮುಖ್ಯಮಂತ್ರಿಗಳು ತಿಳಿಸಿದರು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist