ಬೆಂಗಳೂರು, (www.thenewzmirror.com) ;
ಎರಡನೇ ಬಾರಿಗೆ ಸಿಎಂ ಆಗಿರುವ ಸಿದ್ದರಾಮಯ್ಯ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಖಡಕ್ ಸೂಚನೆಯೊಂದನ್ನ ನೀಡಿದ್ದಾರೆ.
ಸಾಮಾನ್ಯವಾಗಿ ಮುಖ್ಯಮಂತ್ರಿಗಳ ಸಂಚಾರ ಮಾಡ್ತಾರೆ ಅಂದ್ರೆ ಝೀರೋ ಟ್ರಾಫಿಕ್ ಇರೋದು ಮಾಮೂಲಿ. ಅದರಲ್ಲೂ ಬೆಂಗಳೂರಿನಲ್ಲಿ ಓಡಾಟ ಇತ್ತು ಅಂದ್ರೆ ಝೀರೋ ಟ್ರಾಫಿಕ್ ನಿಂದ ಕಿಲೋ ಮೀಟರ್ ಗಟ್ಟಲೇ ವಾಹನಗಳು ಕ್ಯೂನಲ್ಲಿ ನಿಲ್ಲುತ್ತಾ ಇದ್ವು. ಇದನ್ನ ಮನಗಂಡ ನೂತನ ಸಿಎಂ ಸಿದ್ದರಾಮಯ್ಯ ಇನ್ಮುಂದೆ ಝೀರೋ ಟ್ರಾಫಿಕ್ ಬೇಡ ಅಂತ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಸೂಚನೆ ಕೊಟ್ಟಿದ್ದಾರೆ.
ತಮ್ಮ ಸೂಚನೆ ಕುರಿತಾದ ಮಾಹಿತಿಯನ್ನು ಸಾಮಾಜಿಕ ಜಾಲಾತಾಣದಲ್ಲಿ ಹಂಚಿಕೊಂಡಿರುವ ಸಿದ್ದರಾಮಯ್ಯ, ಜೀರೊ ಟ್ರಾಪಿಕ್‌ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತೆ. ಸಾರ್ವಜನಿಕರಿಗೆ ತೊಂದರೆ ಕೊಡಬಾರದು ಎಂಬ ದೃಷ್ಟಿಯಿಂದ ಈ ನಿರ್ಧಾರ ಅಂತ ಬರೆದುಕೊಂಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ಪೋಸ್ಟ್
ನನ್ನ ವಾಹನ ಸಂಚಾರಕ್ಕ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ.
ಜೀರೊ ಟ್ರಾಪಿಕ್‌ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಪೋಸ್ಟ್ ಮಾಡಿದ್ದಾರೆ.