One Nation One Elwction | ಒಂದು ದೇಶ ಒಂದು ಚುನಾವಣೆ: ಕೇಂದ್ರ ಸರ್ಕಾರ ಅನುಮೋದನೆ

One Nation One Elwction | One Country One Election: Central Govt approves

ನವದೆಹಲಿ, (www.thenewzmirror.com);

ಒಂದು ದೇಶ ಒಂದು ಚುನಾವಣೆ ವರದಿಗೆ ದೆಹಲಿಯಲ್ಲಿ ನಡೆದ ಪ್ರಧಾನಿ ಮೋದಿ ನೇತೃತ್ವದ ಸಂಪುಟ ಸಭೆ ಕೋವಿಂದ್ ನೇತೃತ್ವದ ಒಂದು ದೇಶ ಒಂದು ಚುನಾವಣೆ’ ವರದಿಗೆ ಅನುಮೋದನೆ ನೀಡಿದೆ.

RELATED POSTS

ದೇಶದಲ್ಲಿ ಏಕಕಾಲದಲ್ಲಿ ಚುನಾವಣೆ ನಡೆಸುವ ಕುರಿತಂತೆ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿ ರಚಿಸಲಾಗಿತ್ತು. ಆ ಸಮಿತಿ ತನ್ನ ಸಮಗ್ರ ವರದಿಯನ್ನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿತ್ತು.

ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿ ಸುಮಾರು ಏಳು ತಿಂಗಳ ಕಠಿಣ ಸಮಾಲೋಚನೆ ಮತ್ತು ಸಂಶೋಧನೆ ನಡೆಸಿ ಸುಮಾರು 8,626 ಪುಟಗಳ ಈ ವರದಿಯನ್ನು ರಾಷ್ಟ್ರಪತಿ ಅವರಿಗೆ ಸಲ್ಲಿಕೆ ಮಾಡಲಾಗಿತ್ತು.  ಅಂತಿಮವಾಗಿ ಕೇಂದ್ರ ಸರ್ಕಾರ ಇದೀಗ ಆ ವರದಿಯನ್ನ ಅನುಮೋದಿಸಿದೆ.

ಭಾರತದ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ಈ ಸಮಿತಿಯನ್ನು ರಚಿಸಲಾಗಿದೆ . ಈ ಸಮಿತಿಯ ಇತರ ಸದಸ್ಯರುಗಳು

• ಅಮಿತ್ ಶಾ , ಕೇಂದ್ರ ಗೃಹ ಸಚಿವ
• ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ
• ಮಾಜಿ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್
• 15ನೇ ಹಣಕಾಸು ಆಯೋಗದ ಅಧ್ಯಕ್ಷ ಎನ್ಕೆ ಸಿಂಗ್
• ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಡಾ ಸುಭಾಷ್ ಸಿ ಕಶ್ಯಪ್
• ಹಿರಿಯ ವಕೀಲ ಹರೀಶ್ ಸಾಳ್ವೆ
• ಮಾಜಿ ಮುಖ್ಯ ವಿಜಿಲೆನ್ಸ್ ಕಮಿಷನರ್ ಸಂಜಯ್ ಕೊಠಾರಿ

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist