ಬೆಂಗಳೂರು, (www.thenewzmirror com) ;
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಫೈನಲ್ ಪಂದ್ಯಾಟಕ್ಕೆ ಕೆಲವೇ ಗಂಟೆಗಳು ಬಾಕಿ ಇರುವಾಗಲೇ ಅನರ್ಹಗೊಂಡಿರುವ ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿರ್ಜಲೀಕರಣನಿಂದಾಗಿ ತಲೆಸುತ್ತಿ ಬಿದ್ದ ವಿನೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಫೈನಲ್‌ಗೆ ಪ್ರವೇಶಿಸಿದ ಬಳಿಕ ತಮ್ಮ ತೂಕ ಇಳಿಸಿಕೊಳ್ಳಲು ರಾತ್ರಿಪೂರ್ತಿ ವರ್ಕ್‌ಔಟ್ ಮಾಡಿದ್ದ ವಿನೇಶ್, ಇಂದು ನಿರ್ಜಲೀಕರಣದಿಂದಾಗಿ ಅಸ್ವಸ್ತಗೊಂಡಿದ್ದಾರೆ ಎನ್ನಲಾಗಿದೆ. ನಿಗದಿತ ತೂಕಕ್ಕಿಂತ 100 ಗ್ರಾಂ ಹೆಚ್ಚು ಇರುವ ಕಾರಣಕ್ಕೆ ಅವರನ್ನು ಫೈನಲ್ನಿಂದ ಅನರ್ಹ ಮಾಡಲಾಗಿದೆ. 50 ಕೆಜಿ ತೂಕ ವಿಭಾಗದಲ್ಲಿ ಸ್ಪರ್ಧಿಸಿದ್ದ ಅವರು ಇದೀಗ ನಿಗದಿತ ತೂಕಕ್ಕಿಂತ 100 ಗ್ರಾಂ ಹೆಚ್ಚು ಇರುವ ಕಾರಣಕ್ಕೆ ಅವರನ್ನು ಫೈನಲ್ನಿಂದ ಅನರ್ಹ ಮಾಡಲಾಗಿದೆ.