ಬೆಂಗಳೂರು, (www.thenewzmirror.com);
ಲೋಡ್ ಟೆಸ್ಟಿಂಗ್ ಪ್ರಯುಕ್ತ ಕಳೆದ ಮೂರು ದಿನಗಳಿಂದ ಬಂದ್ ಆಗಿದ್ದ ಪೀಣ್ಯ ಫ್ಲೈ ಓವರ್ ಓಪನ್ ಆಗಿದೆ. ಈ ಕುರಿತಂತೆ ಬೆಂಗಳೂರು ಸಂಚಾರ ಪೊಲೀಸರು ಮಾಹಿತಿ ನೀಡಿದ್ದು, ಇಂದಿನಿಂದ ಮುಕ್ತವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲೋಡ್ ಟೆಸ್ಟಿಂಗ್ ಕಾರ್ಯ ನಡೆಸುವ ಅಂಗವಾಗಿ ಜನವರಿ 16 ಅಂದರೆ ಮಂಗಳವಾರ ರಾತ್ರಿ 11 ಗಂಟೆಯಿಂದ ಬಂದ್ ಮಾಡಲಾಗಿತ್ತು. ರಾಷ್ಟ್ರೀಯ ಹೆದ್ದಾರಿ-4ರ ಪೀಣ್ಯ ಎಲಿವೇಟೆಡ್ ಹೈವೇಗೆ ಅಳವಡಿಸಿದ್ದ ವಯಾಡಕ್ಟ್ ದುರಸ್ತಿ ಮಾಡಲಾಗಿದೆ. ಸದ್ಯ ಅದರ ಸಮಗ್ರತೆ ಪರಿಶೀಲನೆ & ಲೋಡ್ ಟೆಸ್ಟಿಂಗ್ ಗಾಗಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿತ್ತು.
ಸದ್ಯ ಪೀಣ್ಯ ಫ್ಲೈಓವರ್ ಲೋಡ್ ಪರೀಕ್ಷೆ ಪೂರ್ಣಗೊಂಡಿದ್ದು, ಇಂದಿನಿಂದ ಲಘು ಮೋಟಾರ್ ವಾಹನಗಳು ಮತ್ತು ಲಘು ಗೂಡ್ಸ್ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಸದ್ಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವ್ಯಾಪ್ತಿಗೆ ಬರುವ ಫ್ಲೈ ಓವರ್ ನ ಲೋಡ್ ಟೆಸ್ಟಿಂಗ್ ವರದಿ ಇನ್ನೂ ಸಿದ್ದವಾಗಬೇಕಿದ್ದು, ಇನ್ನೆರಡು ದಿನಗಳಲ್ಲಿ ವರದಿ ನೀಡಲಿದ್ದಾರೆ ಎಂದೂ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.