ಬೆಂಗಳೂರು(www.thenewzmirror.com): ಭಾರತೀಯ ಸೇನೆಯ ಹೆಸರಿನಲ್ಲಿ ವಿಶೇಷ ಪೂಜೆ ಮಾಡಿ ಎಂದು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಿಗೆ ಮುಜಿರಾಯಿ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ.
ಏಪ್ರಿಲ್ 22 ರಂದು ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಉತ್ತರವಾಗಿ, ಇಂದು ಮುಂಜಾನೆ ಭಾರತವು ಪಾಕ್ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ಶಿಬಿರಗಳ ಮೇಲೆ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಸೇನಾ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದೆ. ನಮ್ಮ ಭಾರತದ ಹೆಮ್ಮೆಯ ಸೇನಾ ಕಾರ್ಯಾಚರಣೆಗೆ ಶುಭಾಶಯಗಳನ್ನು ತಿಳಿಸುತ್ತಾ, ಈ ಸಂದರ್ಭದಲ್ಲಿ ಮುಜರಾಯಿ ಇಲಾಖಾ ವ್ಯಾಪ್ತಿಯ ಎಲ್ಲಾ ದೇವಾಲಯಗಳಲ್ಲಿ ಭಾರತೀಯ ಸೇನೆಯ ಹೆಸರಿನಲ್ಲಿ ವಿಶೇಷ ಪೂಜೆ ಮಾಡಿ , ಆ ದೇವರು ಭಾರತೀಯ ಸೇನೆಗೆ ಮತ್ತಷ್ಟು ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುವಂತೆ ಕ್ರಮ ಕೈಗೊಳ್ಳಿ ಎಂದು ರಾಮಲಿಂಗಾರೆಡ್ಡಿ ಸೂಚಿಸಿದ್ದಾರೆ.