ಬೆಂಗಳೂರು, (www.thenewzmirror.com) ;
ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣಕ್ಕೆ ಬಿಗ ಟ್ವಿಸ್ಟ್ ಸಿಕ್ಕಿದೆ. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಬೆಂಗಳೂರಿನ ಸದಾಶಿವನಗರದ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ಪ್ರಕರಣ ದಾಖಲಿಸಿದ್ದರು. ಇದನ್ನು ಸದ್ಯ ಕೇಂದ್ರ ತನಿಖಾ ದಳ (ಸಿಐಡಿ) ಪ್ರಕರಣ ಸಂಬಂಧ ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಲಾಗಿತ್ತು. ಇದರ ಬೆನ್ನಲ್ಲೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿ ಕೋರ್ಟ್ ಗುರುವಾರ ಆದೇಶ ಹೊರಡಿಸಿದೆ. ಈ ಮೂಲಕ ಯಾವುದೇ ಕ್ಷಣದಲ್ಲಾದ್ರೂ ಬಿಎಸ್ ವೈ ಅವ್ರನ್ನ ಬಂಧಿಸೋ ಸಾಧ್ಯತೆಯಿದೆ.
ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನೀಡಿದ್ದ ನೊಟೀಸ್ ಗೆ ಉತ್ತರ ನೀಡಿದ್ದ ಬಿಎಸ್ ವೈ, ಇದೇ ತಿಂಗಳ ಅಂದರೆ ಜೂನ್ 17ರಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಯಡಿಯೂರಪ್ಪ ಪತ್ರ ಬರೆದಿದ್ದಾರೆ ಎನ್ನಲಾಗಿತ್ತು. ಇದರ ಬೆನ್ನಲ್ಲೇ ಬೆಂಗಳೂರಿನ ಒಂದನೇ ತ್ವರಿತಗತಿ ನ್ಯಾಯಾಲಯವು ಜಾಮೀನು ರಹಿತ ವಾರೆಂಟ್ ಜಾರಿ ಮಾಡಿ ಆದೇಶಿಸಿದ್ದು, ಬಿಎಸ್ ವೈ ಗೆ ಸಂಕಷ್ಟ ಎದುರಾದಂತಾಗಿದೆ.
ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾಗಿರುವ ಯಡಿಯೂರಪ್ಪ ವಿರುದ್ಧ ಲೋಕಸಭಾ ಚುನಾವಣೆಗೂ ಮುನ್ನಾ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಇದರ ಬೆನ್ನಲ್ಲೇ ತನಿಖೆಯ ಪ್ರಗತಿ ಕಂಡಿದ್ದ ಸಂತ್ರಸ್ತೆಯ ಸಹೋದರ ಬಿಎಸ್ ವೈ ಅವ್ರನ್ನ ಬಂಧಿಸಬೇಕೆಂದು ಹೈಕೋರ್ಟ್ ಗೆ ಬುಧವಾರ ಅರ್ಜಿ ಸಲ್ಲಿಸಿದ್ರು. ಬಿಜೆಪಿ ಹಿರಿಯ ನಾಯಕ ಯಡಿಯೂರಪ್ಪ ವಿರುದ್ಧ ಕೇಸ್ ದಾಖಲಿಸಿ ಹಲವು ತಿಂಗಳು ಕಳೆದಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಂತ್ರಸ್ತೆಯ ಸಹೋದರ ಆರೋಪಿಸಿದ್ದಾರೆ.
ಸಹಾಯಕ್ಕಾಗಿ ಮಾಜಿ ಮುಖ್ಯಮಂತ್ರಿಯ ಮನೆಗೆ ತೆರಳಿದಾಗ ಅವರು ತನ್ನ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನವೆಸಗಿದ್ದಾರೆ ಎಂದು ಆರೋಪಿಸಿ ಸಂತ್ರಸ್ತೆ ತಾಯಿ ಮಾರ್ಚ್ ತಿಂಗಳಲ್ಲಿ ಎಫ್ಐಆರ್ ದಾಖಲಿಸಿದ್ದರು. ಫೆಬ್ರವರಿಯಲ್ಲಿ ದೂರು ದಾಖಲಿಸಿದ್ದ ಮಹಿಳೆ ಮೇ 26 ರಂದು ಮೃತಪಟ್ಟಿದ್ದರು. ಸದ್ಯದ ಬೆಳವಣಿಗೆ ಗಮನಿಸಿದ್ರೆ ಯಡಿಯೂರಪ್ಪ ಅವರನ್ನು ಮತ್ತೆ ಬಂಧಿಸಿ ಜೈಲಿಗೆ ಕಳುಹಿಸಲು ಸರ್ಕಾರ ಸಿದ್ಧತೆ ನಡೆಸಿದೆಯೇ? ಇದೀಗ ಆಗಿರುವ ದಿಢೀರ್ ಬೆಳವಣಿಗೆಗಳನ್ನು ನೋಡಿದರೆ ಯಡಿಯೂರಪ್ಪ ಅವರ ಬಂಧನ ನಿಶ್ಚಿತ ಎನ್ನುವ ಹಂತ ತಲುಪಿದೆ. ಮೂರು ತಿಂಗಳ ಹಿಂದೆ, ಲೋಕಸಭಾ ಚುನಾವಣೆಗೂ ಮೊದಲು ದಾಖಲಾಗಿದ್ದ ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ಕಿರುಕುಳ ಪ್ರಕರಣ ಚುನಾವಣೆಯ ಫಲಿತಾಂಶದ ನಂತರ ದಿಢೀರ್ ಬೆಳವಣಿಗೆ ಕಂಡಿದ್ದು, ಯಡಿಯೂರಪ್ಪ ಅವರನ್ನು ಬಂಧಿಸುವ ಸಿದ್ಧತೆ ನಡೆದಿದೆ ಎನ್ನಲಾಗಿದೆ.