Political News | ವಿಜಯಪುರ ಜಿಲ್ಲೆಯಲ್ಲಿ ಕೆನಡಾದ ವಿಟೆರಾದಿಂದ ₹250 ಕೋಟಿ ಹೂಡಿಕೆ: ಸಚಿವ ಎಂ. ಬಿ. ಪಾಟೀಲ

ಬೆಂಗಳೂರು, (www.thenewzmirror.com) ;

ʼವಿಜಯಪುರ ಜಿಲ್ಲೆಯಲ್ಲಿ ಕೃಷಿ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಕೆನಡಾದ ಕೃಷಿ ಉತ್ಪನ್ನ ತಯಾರಿಕಾ ಪ್ರಮುಖ ಕಂಪನಿಯಾಗಿರುವ ವಿಟೆರಾ ₹250 ಕೋಟಿ ಮೊತ್ತದ ಬಂಡವಾಳ ಹೂಡಲಿದೆʼ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.

RELATED POSTS

ವಿಟೆರಾ ಕಂಪನಿಯ ಪ್ರತಿನಿಧಿಗಳ ಜತೆ ಸಚಿವರು ಇಲ್ಲಿನ ಖನಿಜ ಭವನದಲ್ಲಿ ನಡೆಸಿದ ಸಭೆಯಲ್ಲಿ ಈ ಬಂಡವಾಳ ಹೂಡಿಕೆ ನಿರ್ಧಾರ ಕೈಗೊಳ್ಳಲಾಗಿದೆ.

ʼವಿಜಯಪುರ ಜಿಲ್ಲೆಯ ಕೃಷಿ ಸಮುದಾಯದ ಬಳಕೆಗೆ ಅತ್ಯಾಧುನಿಕ ಶೈತ್ಯಾಗಾರಗಳನ್ನು ನಿರ್ಮಿಸಿ ರೈತರು ಸುಗ್ಗಿಯ ನಂತರ ಎದುರಿಸುವ ನಷ್ಟ ತಗ್ಗಿಸಲು ಮತ್ತು ಕೃಷಿ ಉತ್ಪನ್ನಗಳ ಉತ್ಪಾದನೆ, ಪೂರೈಕೆ ಹಾಗೂ ಮಾರಾಟ ಪ್ರಕ್ರಿಯೆಯಲ್ಲಿ ದಕ್ಷತೆ ತರಲು ವಿಟೆರಾ ನೆರವಾಗಲಿದೆ. ವಿಟೆರಾ ಕಂಪನಿಯು ಸುಧಾರಿತ ಉತ್ಪಾದನಾ ತಂತ್ರಜ್ಞಾನ ಬಳಸಲಿದೆ. ರಾಜ್ಯದಲ್ಲಿ ಕೆನಡಾದ ಆಧುನಿಕ ಕೃಷಿ ತಂತ್ರಜ್ಞಾನ ಬಳಕೆ ಹಾಗೂ ಈ ಬಂಡವಾಳ ಹೂಡಿಕೆಯಿಂದ ಕೃಷಿ ಕ್ಷೇತ್ರದ ಉತ್ಪಾದನೆ ಹೆಚ್ಚಲಿದ್ದು, ಅದರಿಂದ ರಾಜ್ಯದ ಒಟ್ಟಾರೆ ಆರ್ಥಿಕತೆಗೂ ಉತ್ತೇಜನ ದೊರೆಯಲಿದೆʼ ಎಂದೂ ಸಚಿವರು ಹೇಳಿದ್ದಾರೆ.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist